ಅಥಣಿ:ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಕೈ ಕಾರ್ಯಕರ್ತರು ಒತ್ತಾಯಿಸಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಥಣಿ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ: ಕೈ ನಾಯಕರಿಗೆ ಟಿಕೆಟ್ ಹಂಚಿಕೆ ತಲೆನೋವು - ಅಥಣಿ ಉಪಚುನಾವಣೆ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು ಹೊರಗಿನ ಅಭ್ಯರ್ಥಿಗೆ ಟಿಕೆಟ್ ನೀಡದೇ ಸ್ಥಳೀಯರಿಗೆ ಪ್ರಾತಿನಿಧ್ಯ ನೀಡ ಬೇಕೆಂದು ಕೈ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.
ಅಥಣಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಕೈ ನಾಯಕರಿಗೆ ಕಗ್ಗಂಟಾಗಿರುವ ಟಿಕೆಟ್ ಹಂಚಿಕೆ
ಡಿಸೆಂಬರ್ 5 ರಂದು ಅಥಣಿ ಉಪಚುನಾವಣೆ ನಡೆಯಲಿದ್ದು ನಾಮಪತ್ರ ಸಲ್ಲಿಕೆ ಕೊನೆಯ ಹಂತಕ್ಕೆ ಬಂದು ತಲುಪಿದೆ. ಆದ್ರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ಗೊಂದಲ ಇನ್ನೂ ನಿವಾರಣೆಯಾಗಿಲ್ಲ. ಕಾಂಗ್ರೆಸ್‌ನಲ್ಲಿ 12 ಜನ ಟಿಕೆಟ್ ಆಕಾಂಕ್ಷಿಗಳು ಇರುವುದರಿಂದ ಯಾರಿಗೆ ಟಿಕೆಟ್ ನೀಡಬೇಕು ಅನ್ನೋದು ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.
ಮಾಜಿ ಶಾಸಕ ಸಹಜಾನ ಡೊಂಗರಗಾವ, ಗಜಾನನ ಮಂಗಸುಳಿ, ಸದಾಶಿವ ಬುಟಾಳೆ ಎಂಬ ನಾಯಕರು ಮೂರು ಬಣಗಳಲ್ಲಿದ್ದು ಬಿ ಫಾರಂ ನಮಗೆ ಬೇಕು ಅಂತ ಪಟ್ಟು ಹಿಡಿದಿದ್ದಾರೆ.