ಅಥಣಿ: 15 ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಅಥಣಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಗೆಲುವಿಗಾಗಿ ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ.
ಗೆಲುವಿಗಾಗಿ ದೇವರ ಮೊರೆ ಹೋದ ಕೈ, ಕಮಲ ಕಾರ್ಯಕರ್ತರು - Athani by election constituency result
ಅಥಣಿ ಉಪ ಚುನಾವಣೆ ಕ್ಷೇತ್ರದ ಅಭ್ಯರ್ಥಿಗಳ ಗೆಲುವಿಗಾಗಿ ಕಾಂಗ್ರೆಸ್, ಬಿಜೆಪಿ ಪಕ್ಷದ ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ

ದೇವರ ಮೊರೆ ಹೋದ ಅಥಣಿ ಕ್ಷೇತ್ರದ ಅಭ್ಯರ್ಥಿಗಳು
ದೇವರ ಮೊರೆ ಹೋದ ಅಥಣಿ ಕ್ಷೇತ್ರದ ಅಭ್ಯರ್ಥಿಗಳು
ಮಹೇಶ್ ಕುಮಟಳ್ಳಿ ಮನೆಯಲ್ಲಿ ದೇವರ ಮುಂದೆ ತುಪ್ಪದ ದೀಪ ಹಚ್ಚಿ ಅವರ ಗೆಲುವಿಗಾಗಿ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು. ಜೊತೆಗೆ ಅವರ ಸಹೋದರ ಪ್ರಕಾಶ್ ಕುಮಟಳ್ಳಿ ಅಥಣಿ ಶಿವಯೋಗಿಗಳ ಮಂದಿರಕ್ಕೆ ಹೋಗಿ ಪ್ರಾರ್ಥನೆ ಮಾಡಿದರು. ಬಳಿಕ ಮಾತನಾಡಿದ ಅವರು, ಫಲಿತಾಂಶ ಹೇಗೆ ಬಂದರೂ ಅದು ದೇವರ ನಿರ್ಣಯ ಎಂದರು.
ಇನ್ನು ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಜಯ ಗಳಿಸಲಿ ಎಂದು ಅವರ ಬೆಂಬಲಿಗರು ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.