ಬೆಳಗಾವಿ: ಉಪಚುನಾವಣೆ ಇರುವ ಹಿನ್ನೆಲೆಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ತಾಲೂಕಿನ ಐಗಳಿ ಗ್ರಾಮದ ಪ್ರಾಥಮಿಕ ಶಾಲಾ ಮಕ್ಕಳಿಂದ ಮತದಾನದ ಕುರಿತು ಜಾಗೃತಿ ಜಾಥಾ ನಡೆಸಲಾಯಿತು.
ಉಪ ಚುನಾವಣೆ: ಶಾಲಾ ಮಕ್ಕಳಿಂದ ಮತದಾನದ ಕುರಿತು ಜಾಗೃತಿ ಅಭಿಯಾನ - athani Awareness Campaign on Voting
ಅಥಣಿ ತಾಲೂಕಿನ ಐಗಳಿ ಪ್ರಾಥಮಿಕ ಶಾಲೆ ಮಕ್ಕಳಿಂದ ಮತದಾನದ ಕುರಿತು ಜಾಗೃತಿ ಮೂಡಿಸಲು ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿತ್ತು.
ಪ್ರಾಥಮಿಕ ಶಾಲಾ ಮಕ್ಕಳಿಂದ ಮತದಾನದ ಕುರಿತು ಜಾಗೃತಿ ಜಾಥಾ
ಪ್ರತಿ ಚುನಾವಣೆಯಲ್ಲಿ ಮತದಾನ ಕಡಿಮೆ ಆಗುತ್ತಿರುವ ಹಿನ್ನೆಲೆ ಹಾಗೂ ಮತದಾರರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯಿತಿ ಸಂಯೋಗದಿಂದ ಈ ಮತದಾನ ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು. ಐಗಳಿ ಶಾಲೆಯ ಮಕ್ಕಳು ಗ್ರಾಮದ ಬೀದಿ ಒಳಗಡೆ ತಿರುಗಾಡಿ 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಘೋಷಣೆಗಳನ್ನು ಕೂಗಿದರು.