ಬೆಳಗಾವಿ: ಬೆಳಗಾವಿ ತಾಲೂಕಿನ ಕಲ್ಯಾಳ್ ಸೇತುವೆ ಬಳಿ ಭಾನುವಾರ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದೆ. ಕಿರಣ್ ಅಶೋಕ್ ಕಳಸಣ್ಣವರ್ ಮೃತ ಕಾರ್ಮಿಕ.
ಬೆಳಗಾವಿ ಬಳಿ ಕ್ರೂಸರ್ ಪಲ್ಟಿ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ - ಅಪಘಾತ ಪ್ರಕರಣ
ಬೆಳಗಾವಿ ಬಳಿ ಕ್ರೂಸರ್ ವಾಹನ ಪಲ್ಟಿಯಾದ ಪರಿಣಾಮ ಇಂದು ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದಾರೆ.
ಬೆಳಗಾವಿ ಬಳಿ ಕ್ರೂಸರ್ ಪಲ್ಟಿ ಪ್ರಕರಣ
ಮೃತ ಕಿರಣ್ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ನಿವಾಸಿಯಾಗಿದ್ದಾರೆ. ಭಾನುವಾರ ಬೆಳಗ್ಗೆ ಕಳ್ಯಾಳ್ ಸೇತುವೆ ಬಳಿ ಕ್ರೂಸರ್ ಪಲ್ಟಿಯಾಗಿ ಭೀಕರ ಅಪಘಾತ ನಡೆದಿತ್ತು. ಸ್ಥಳದಲ್ಲೇ 7 ಮಂದಿ ಕಾರ್ಮಿಕರು ಮೃತಪಟ್ಟು, 14 ಜನ ಕಾರ್ಮಿಕರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಿರಣ್ ಅವರನ್ನು ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಕಿರಣ್ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
(ಇದನ್ನೂ ಓದಿ: ಬೆಳಗಾವಿ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ)