ಬೆಳಗಾವಿ: ಜಿಲ್ಲೆಯ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತಾರಾಜ್ಯ ಗಾಂಜಾ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಮೀರಜ್ನ ಫಾರೂಖ್ ಖಾನ್ (37) ಹಾಗೂ ಅಮನ್ ಜಮಾದಾರ್(20) ಬಂಧಿತ ಆರೋಪಿಗಳು. ಇವರು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದರು.
ಬೆಳಗಾವಿ ಸಿಸಿಬಿ ಪೊಲೀಸರ ಕಾರ್ಯಾಚರಣೆ : ಇಬ್ಬರು ಅಂತಾರಾಜ್ಯ ಪೆಡ್ಲರ್ ಅರೆಸ್ಟ್ - Drug Peddlers arrest news
ಗಾಂಜಾ ಪೂರೈಕೆ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಗಾಂಜಾ ಪೆಡ್ಲರ್ಗಳನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಇವರು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದರು..

ಬೆಳಗಾವಿ ಸಿಸಿಬಿ ಪೊಲೀಸರ ಕಾರ್ಯಾಚರಣೆ
ಬಂಧಿತರಿಂದ 8 ಕೆಜಿ 300 ಗ್ರಾಂ ಗಾಂಜಾ ಮತ್ತು 2 ಲಕ್ಷ ರೂಪಾಯಿ ನಗದು ಹಾಗೂ ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಿಕೊಳ್ಳಲಾಗಿದೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಿಗೆ ಈ ಆರೋಪಿಗಳು ಗಾಂಜಾ ಸರಬರಾಜು ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಬೆಳಗಾವಿ ನಗರದ ಹೊರ ವಲಯದಲ್ಲಿ ಇಬ್ಬರನ್ನ ಬಂಧಿಸಿದ್ದಾರೆ.
ಬೆಳಗಾವಿ ಸಿಸಿಬಿ ಪೊಲೀಸರ ಕಾರ್ಯಾಚರಣೆ
ಇದನ್ನೂ ಓದಿ:ಡಿಕ್ಕಿ ಹೊಡೆದ ರೋಪ್ ವೇ ಕಾರುಗಳು, ಕೆಳಗೆ ಹಾರಿಬಿದ್ದ ದಂಪತಿ.. ಮಹಿಳೆ ಸಾವು, ಗಾಳಿಯಲ್ಲೇ ಸಿಲುಕಿದ್ರು 50 ಜನ!