ಕರ್ನಾಟಕ

karnataka

ETV Bharat / city

ಗುತ್ತಿಗೆದಾರ ಆತ್ಮಹತ್ಯೆ: ಬಿಎಸ್​ವೈ, ಅರುಣ್ ಸಿಂಗ್ ತಂಗಿದ್ದ ಹೋಟೆಲ್ ಮುತ್ತಿಗೆಗೆ ಆಪ್ ಯತ್ನ - ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ

ಗುತ್ತಿಗೆದಾರ ಸಂತೋಷ ಪಾಟೀಲ್​ ಆತ್ಮಹತ್ಯೆ ಪ್ರಕರಣ ಖಂಡಿಸಿ ಆಪ್ ಕಾರ್ಯಕರ್ತರು, ಬಿಜೆಪಿ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.

ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ
ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ

By

Published : Apr 12, 2022, 1:37 PM IST

ಬೆಳಗಾವಿ: ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣ ಖಂಡಿಸಿ ಆಮ್​ ಆದ್ಮಿ ಪಕ್ಷದ ಕಾರ್ಯಕರ್ತರು, ನಗರದಲ್ಲಿ ಬಿಜೆಪಿ ನಾಯಕರು ತಂಗಿರುವ ಹೋಟೆಲ್​ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಬಿಜೆಪಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ಹಿನ್ನೆಲೆಯಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಮಾಜಿ ಸಿಎಂ ಬಿಎಸ್‌ವೈ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಂಗಿದ್ದಾರೆ. ಗುತ್ತಿಗೆದಾರ ಸಂತೋಷ್​ ಪಾಟೀಲ್ ಆತ್ಮಹತ್ಯೆ ಸುದ್ದಿ ಗೊತ್ತಾಗುತ್ತಿದ್ದಂತೆ ಆಪ್ ಕಾರ್ಯಕರ್ತರು ಹೋಟೆಲ್​ಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಪ್ ನಾಯಕ ರಾಜು ಟೋಪನವರ ನೇತೃತ್ವದಲ್ಲಿ ಹೋಟೆಲ್‌ಗೆ ಮುತ್ತಿಗೆ ಹಾಕಿ, ಸಂತೋಷ್​ ಸಾವಿಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ದೂರಿದ್ದಾರೆ. ಜೊತೆಗೆ ಸಚಿವ ಈಶ್ವರಪ್ಪ, ಬಿಎಸ್‌ವೈ, ಅರುಣ್ ಸಿಂಗ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಹೋಟೆಲ್ ಮುತ್ತಿಗೆಗೆ ಯತ್ನಿಸಿದ ಆಪ್ ಕಾರ್ಯಕರ್ತರನ್ನು ಮಾಳಮಾರುತಿ ಠಾಣೆ ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದರು.

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ರಷ್ಟು ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ವಾಟ್ಸಪ್​ನಲ್ಲಿ ಡೆತ್ ನೋಟ್ ಕಳಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿಯ ಲಾಡ್ಜ್​ನಲ್ಲಿ ಗುತ್ತಿಗೆದಾರ ಸಂತೋಷ್​ ಪಾಟೀಲ ನೇಣು ಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

(ಇದನ್ನೂ ಓದಿ: ಈಶ್ವರಪ್ಪ ವಿರುದ್ಧ ಕಮಿಷನ್​ ಆರೋಪ ಮಾಡಿದ್ದ ಗುತ್ತಿಗೆದಾರ.. ಬೆಳಗಾವಿಯ ಸಂತೋಷ್​ ಪಾಟೀಲ್​ ಆತ್ಮಹತ್ಯೆ)

ABOUT THE AUTHOR

...view details