ಬೆಳಗಾವಿ: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಡಿಸಿಸಿ ಬ್ಯಾಂಕ್ ಸಿಬ್ಬಂದಿ ದಿಢೀರ್ ಪ್ರತಿಭಟನೆ ನಡೆಸಿದರು. ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿಗೆ ಮುತ್ತಿಗೆ ಹಾಕಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಡಿಸಿಸಿ ಬ್ಯಾಂಕ್‌ಗೆ ನಬಾರ್ಡ್ ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆ ಬ್ಯಾಂಕ್‌ಗೆ ಆಗಮಿಸಿದ ರಮೇಶ್ ಕತ್ತಿ ಅವರನ್ನು ಬ್ಯಾಂಕ್ ಸಿಬ್ಬಂದಿ ಮುತ್ತಿಗೆ ಹಾಕಿದರು.
ಬ್ಯಾಂಕ್ ಗೇಟ್‌ನಲ್ಲೇ ರಮೇಶ್ ಕತ್ತಿ ಅವರನ್ನು ತಡೆದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಸಿಬ್ಬಂದಿ ದಿಢೀರ್ ಪ್ರತಿಭಟನೆ ಬೆನ್ನಲ್ಲೇ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತ ಮಂಡಳಿ ಸಭೆ ನಡೆಸಲಾಯಿತು.