ಕರ್ನಾಟಕ

karnataka

ETV Bharat / city

ಮುಂದಿನ ಹೋರಾಟಕ್ಕೆ ತಂತ್ರ: ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ - Siddaramaiah will Holds congress leader Meeting

ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಆರಂಭವಾಗಿ ಒಂದು ವಾರ ಪೂರ್ಣಗೊಂಡಿದ್ದು, ಸಾಕಷ್ಟು ವಿಚಾರಗಳ ಮೇಲೆ ಚರ್ಚೆ ನಡೆದಿದೆ. ಕೆಆರ್​ ​ಪುರಂನಲ್ಲಿ ಸಚಿವ ಭೈರತಿ ಬಸವರಾಜ್ ಅಕ್ರಮವಾಗಿ ಭೂ ಕಬಳಿಕೆ ಮಾಡಿರುವ ಆರೋಪ ವಿಚಾರವನ್ನು ಅತ್ಯಂತ ದೊಡ್ಡ ಮಟ್ಟದಲ್ಲಿ ಪ್ರಸ್ತಾಪಿಸಿ ಕಾಂಗ್ರೆಸ್ ಹೋರಾಟ ನಡೆಸಿದೆ. ಅದನ್ನ 2ನೇ ವಾರವೂ ಮುಂದುವರೆಸುವ ವಿಚಾರವಾಗಿ ಇಂದು ಸಭೆಯಲ್ಲಿ ತೀರ್ಮಾನವಾಗಲಿದೆ.

Siddaramaiah will Holds congress leader Meeting
ಸುವರ್ಣ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

By

Published : Dec 20, 2021, 11:13 AM IST

ಬೆಳಗಾವಿ:ಸುವರ್ಣ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಆರಂಭವಾಗಿ ಒಂದು ವಾರ ಪೂರ್ಣಗೊಂಡಿದ್ದು, ಸಾಕಷ್ಟು ವಿಚಾರಗಳ ಮೇಲೆ ಚರ್ಚೆ ನಡೆದಿದೆ.

ಸುವರ್ಣ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

ಆಡಳಿತ ಪಕ್ಷದ ಕೆಲ ಲೋಪಗಳನ್ನು ಮುಂದಿಟ್ಟು ಕಾಂಗ್ರೆಸ್ ದೊಡ್ಡಮಟ್ಟದ ಹೋರಾಟವನ್ನು ನಡೆಸಿದೆ. ಕೆ ಆರ್ ​​ಪುರಂನಲ್ಲಿ ಸಚಿವ ಭೈರತಿ ಬಸವರಾಜ್ ಅಕ್ರಮವಾಗಿ ಭೂ ಕಬಳಿಕೆ ಮಾಡಿರುವ ಆರೋಪ ವಿಚಾರವನ್ನು ಅತ್ಯಂತ ದೊಡ್ಡ ಮಟ್ಟದಲ್ಲಿ ಪ್ರಸ್ತಾಪಿಸಿ ಕಾಂಗ್ರೆಸ್ ಹೋರಾಟ ನಡೆಸಿದೆ. ಅದನ್ನ 2ನೇ ವಾರವೂ ಮುಂದುವರೆಸುವ ವಿಚಾರವಾಗಿ ಇಂದು ಸಭೆಯಲ್ಲಿ ತೀರ್ಮಾನವಾಗಲಿದೆ.

ವಿಧಾನಸಭೆ ಹಾಗೂ ವಿಧಾನ ಪರಿಷತ್​​ನ ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯರು ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಲಿದ್ದಾರೆ. ಭೂ ಕಬಳಿಕೆ ಜತೆಗೆ ಬಿಟ್-ಕಾಯಿನ್ ಹಗರಣ, 40% ಕಿಕ್​ಬ್ಯಾಕ್​ ವಿಚಾರ ಪ್ರಸ್ತಾಪ, ಮತ್ತೆ ಸುದ್ದಿಯಾಗಿರುವ ಸಿಎಂ ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಮುಂದಿನ ನಾಲ್ಕು ದಿನ ಯಾವ ರೀತಿಯ ಚರ್ಚೆ ನಡೆಸಬೇಕು?, ಯಾವ್ಯಾವ ಸದಸ್ಯರು ಯಾವ ವಿಚಾರಗಳ ಮೇಲೆ ಮಾತನಾಡಬೇಕು ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗ್ತಿದೆ.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಸ್ಥಳಕ್ಕೆ ಭೇಟಿ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸುವರ್ಣ ವಿಧಾನಸೌಧಕ್ಕೆ ಆಗಮಿಸುತ್ತಿದ್ದಂತೆ ಸಭೆ ಆರಂಭವಾಗಿದೆ. ಸದ್ಯ ಸಭೆಯಲ್ಲಿ ಪಾಲ್ಗೊಳ್ಳಲು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್​​.ಆರ್ ಪಾಟೀಲ್, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಕಾಂಗ್ರೆಸ್ ಶಾಸಕರಾದ ಸಿ ಎಂ ಇಬ್ರಾಹಿಂ, ಈ ತುಕಾರಾಂ, ಪ್ರತಾಪ್ ಚಂದ್ರ ಶೆಟ್ಟಿ, ಎಂ.ನಾರಾಯಣಸ್ವಾಮಿ ಮತ್ತಿತರ ನಾಯಕರು ಆಗಮಿಸಿದ್ದಾರೆ.

ಮುಂದಿನ ನಾಲ್ಕೈದು ದಿನದ ಅಧಿವೇಶನದಲ್ಲಿ ಕೈಗೊಳ್ಳಬಹುದಾದ ಹೋರಾಟಗಳ ಕುರಿತು ಚರ್ಚೆ ನಡೆಸಲಿರುವ ನಾಯಕರು ಅತ್ಯಂತ ಪ್ರಮುಖವಾಗಿ ರಾಜ್ಯ ಸರ್ಕಾರ ಇದೇ ಅಧಿವೇಶನದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಪ್ರಮುಖವಾಗಿ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಭೈರತಿ ಬಸವರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದಿದ್ರೆ ಸಿಎಂ ಅವರನ್ನ ವಜಾ ಮಾಡಬೇಕು: ಸಿದ್ದರಾಮಯ್ಯ

ABOUT THE AUTHOR

...view details