ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಮತ ಎಣಿಕೆಗೆ ನಗರದ ರಾಣಿ ಪಾರ್ವತಿ ದೇವಿ ಕಾಲೇಜು ಸಜ್ಜುಗೊಂಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಕಾಲೇಜು ಆವರಣದ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಭದ್ರತಾ ದೃಷ್ಟಿಯಿಂದ ನಗರ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ ನೇತೃತ್ವದಲ್ಲಿ 800 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.ಒಟ್ಟು 8 ಮತ ಎಣಿಕೆ ಕೇಂದ್ರ ತೆರೆಯಲಾಗಿದ್ದು, ಮತ ಎಣಿಕೆಗೆ 500ಕ್ಕೂ ಅಧಿಕ ಸಿಬ್ಬಂದಿ ನೇಮಕ ಮಾಡಲಾಗಿದೆ.
18 ಹಂತದಲ್ಲಿ ಮತ ಎಣಿಕೆ ನಡೆಯಲಿದೆ. ಬೆಳಗ್ಗೆ 8ಕ್ಕೆ ಅಂಚೆ ಮತದಾನ ಹಾಗೂ 8.30 ರಿಂದ ಇವಿಎಂ ಯಂತ್ರಗಳ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿ ತುಷಾರ ತಿಳಿಸಿದ್ದಾರೆ.