ಬೆಳಗಾವಿ:ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮಂಜೂರಾಗಿದ್ದ ಅನುದಾನ ಬಿಡುಗಡೆಗಾಗಿ ಶೇ.5 ರಷ್ಟು ಲಂಚ ಕೇಳಿದ್ದ ಬೆಳಗಾವಿಯ ಮುಜರಾಯಿ ಇಲಾಖೆ ತಹಶೀಲ್ದಾರ್ ಮತ್ತು ಆತನ ಸಂಬಂಧಿಯನ್ನು ಎಸಿಬಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ಮುಜರಾಯಿ ತಹಶೀಲ್ದಾರ್ ದಶರಥ ನಕುಲ ಜಾಧವ ಹಾಗೂ ಆತನ ಸಂಬಂಧಿ ಸಂತೋಷ ಕಡೋಲಕರ ಬಂಧಿತ ಆರೋಪಿಗಳು. ರಾಮದುರ್ಗದಲ್ಲಿನ ಯಕಲಮ್ಮ ದೇವಸ್ಥಾನ ಜೀರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯ ಆರಾಧನಾ ಸ್ಕೀಂ ಅಡಿ 4 ಲಕ್ಷ ರೂ. ಮಂಜೂರಾಗಿತ್ತು. ಅನುದಾನ ಬಿಡುಗಡೆಗಾಗಿ ನಕುಲ ಜಾಧವ ರೂ.20 ಸಾವಿರ ಬೇಡಿಕೆ ಇಟ್ಟಿದ್ದರು.
ಓದಿ:ಉಕ್ರೇನ್ ಬಿಕ್ಕಟ್ಟು: ತಟಸ್ಥ ನೀತಿ ಅನುಸರಿಸಲಿದೆಯಾ ಭಾರತ?
ಲಂಚದ ವಿಚಾರಕ್ಕೆ ಸಂಬಂಧಪಟ್ಟಂತೆ ದೇವಸ್ಥಾನದ ಸುಭಾಷ ಗೋಡಕೆ ಎಂಬವವರು ಎಸಿಬಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ತಹಶೀಲ್ದಾರ್ ಪರವಾಗಿ ಲಂಚ ಸ್ವೀಕರಿಸುತ್ತಿದ್ದ ಆತನ ಸಂಬಂಧಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ. ಬಳಿಕ ಇದೇ ಪ್ರಕರಣದಲ್ಲಿ ತಹಶೀಲ್ದಾರ್ ಜಾಧವ ಅವರನ್ನೂ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಎಸಿಬಿ ಎಸ್ಪಿ ಬಿ. ಎಸ್.ನೇಮಗೌಡ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಮತ್ತು ಸಿಬ್ಬಂದಿ ದಾಳಿ ನಡೆಸಿದರು.
ಜಾಹೀರಾತು:ಗ್ರಾಹಕರ ಸೋಗಿನಲ್ಲಿ ಆಭರಣ ಮಳಿಗೆಗೆ ನುಗ್ಗಿದ ಖದೀಮರು: ಹಾಡಹಗಲೇ ಕೋಟ್ಯಂತರ ರೂ. ಚಿನ್ನಾಭರಣ ಕಳ್ಳತನ