ಬೆಳಗಾವಿ: ಕ್ಯಾಂಟರ್ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಬೆಳಗಾವಿ - ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಬೈಕ್ - ಕ್ಯಾಂಟರ್ ಡಿಕ್ಕಿ: ಬಾಲಕಿಯ ಕಣ್ಮುಂದೆಯೇ ತಂದೆ - ತಾಯಿ ಸಾವು - ಬೆಳಗಾವಿ ಹೆದ್ದಾರಿ ಬೈಕ್ ಲಾರಿ ಅಪಘಾತ
ಬೆಳಗಾವಿ - ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಸಾವಿಗೀಡಾಗಿ ಬಾಲಕಿ ಗಾಯಗೊಂಡ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತ
ಬೈಲಹೊಂಗಲ ತಾಲೂಕಿನ ಮೇಕಲಮರಡಿ ಗ್ರಾಮದ ನಿವಾಸಿ ನಾಗಪ್ಪ ಹುಲಮನಿ (40) ಹಾಗೂ ಶ್ಯಾಮಲವ್ವ ಹುಲಮನಿ ಮೃತ ದುರ್ದೈವಿಗಳು. ಘಟನೆಯಲ್ಲಿ ದಂಪತಿ ಪುತ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಗಂಭೀರ ಗಾಯಗೊಂಡಿರುವ ಬಾಲಕಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಭೀಕರ ರಸ್ತೆ ಅಪಘಾತ: ದಂಪತಿ ಸಾವು
ಮೇಕಲಮರಡಿ ಕ್ರಾಸ್ ಬಳಿ ಬೈಕಿಗೆ ಕ್ಯಾಂಟರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಸ್ಥಳೀಯರು ಕ್ಯಾಂಟರ್ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Mar 24, 2020, 8:47 PM IST