ಚಿಕ್ಕೋಡಿ:ಕೊರೊನಾ ವೈರಸ್ ಹರಡುವುದನ್ನು ತಡೆಯುವ ಸಲುವಾಗಿ ಲಾಕ್ಡೌನ್ ಜಾರಿಗೆ ತಂದಿದ್ದರೂ ಜನ ಡೋಂಟ್ಕೇರ್ ಎನ್ನುತ್ತಿದ್ದಾರೆ. ಮನೆ ಬಿಟ್ಟು ಹೊರ ಬಂದರೆ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಆದರೂ ಜನ ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ, ಮಾತುಕೇಳದ ಜನರಿಗೆ ಬುದ್ಧಿ ಕಲಿಸಲು ರಾಜ್ಯ ಪೊಲೀಸರು ಮುಂದಾಗಿದ್ದಾರೆ.
ಲಾಕ್ಡೌನ್ಗೂ ಡೋಂಟ್ಕೇರ್: ಬೈಕ್ ವಶಕ್ಕೆ ಪಡೆಯುತ್ತಿರುವ ಪೊಲೀಸರು - ಲಾಕ್ಡೌನ್ ಆದೇಶ ಉಲ್ಲಂಘನೆ
ಪೊಲೀಸರು ಅನಗತ್ಯವಾಗಿ ಮನೆಯಿಂದ ಹೊರಗೆ ಬರುತ್ತಿರುವ ಬೈಕ್ಗಳನ್ನ ಸೀಜ್ ಮಾಡಲಾಗುತ್ತಿದ್ದು, 20 ಕ್ಕೂ ಹೆಚ್ಚು ಜನರ ಬೈಕ್ ಸೀಜ್. ಹುಕ್ಕೇರಿ ಪಟ್ಟಣದಲ್ಲಿ ಕಾರ್ಯಾಚರಣೆಗೆ ಇಳಿದಿರುವ ಪೊಲೀಸರು
![ಲಾಕ್ಡೌನ್ಗೂ ಡೋಂಟ್ಕೇರ್: ಬೈಕ್ ವಶಕ್ಕೆ ಪಡೆಯುತ್ತಿರುವ ಪೊಲೀಸರು bike seize](https://etvbharatimages.akamaized.net/etvbharat/prod-images/768-512-6576248-284-6576248-1585406916975.jpg)
ಬೈಕ್ ಸೀಜ್
ಅನಗತ್ಯವಾಗಿ ರಸ್ತೆಗಿಳಿಯುತ್ತಿರುವ ಜನರ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಪಿಎಸ್ಐ ಶಿವಾನಂದ ಗುಡಗನಟ್ಟಿ ಅವರು ಹುಕ್ಕೇರಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೈಕ್ಗಳನ್ನು ವಶಕ್ಕೆ ಪಡೆಯುತ್ತಿರುವ ಪೊಲೀಸರು
ಜನರ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೆ ದಿನೇ ಅಪಾರ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಹೀಗಾಗಿ ಅದನ್ನು ನಿಯಂತ್ರಿಸಲು ಲಾಕ್ಡೌನ್ ಮಾಡಲಾಗಿದೆ. ಆದರೂ ಜನರು ಓಡಾಡುವುದನ್ನು ನಿಲ್ಲಿಸಲಿಲ್ಲ. ಹೀಗಾಗಿ ಬೈಕ್ ಜಪ್ತಿ ಮಾಡುತ್ತಿದ್ದಾರೆ. ಹುಕ್ಕೇರಿಯಲ್ಲಿ ಈಗಾಗಲೇ 20ಕ್ಕೂ ಹೆಚ್ಚು ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.