ಕರ್ನಾಟಕ

karnataka

ETV Bharat / city

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ.. ಸಂಸದ ಅಣ್ಣಾಸಾಹೇಬ ಜೊಲ್ಲೆ - Mp AnnaSaheba Jolle

ಜಿಲ್ಲೆಯಲ್ಲಿನ ಮೂರು ಉಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ. ಹೈಕಮಾಂಡ್ ನಮಗೆ ನೀಡಿರುವ ಕೆಲಸವನ್ನು ಜವಾಬ್ದಾರಿಯುತವಾಗಿ ಮಾಡುತ್ತೇವೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ.

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ..ಸಂಸದ ಅಣ್ಣಾಸಾಹೇಬ ಜೊಲ್ಲೆ

By

Published : Oct 12, 2019, 8:34 PM IST

ಬೆಳಗಾವಿ : ಜಿಲ್ಲೆಯಲ್ಲಿನ ಮೂರು ಉಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ. ಹೈಕಮಾಂಡ್ ನಮಗೆ ನೀಡಿರುವ ಕೆಲಸವನ್ನು ಜವಾಬ್ದಾರಿಯುತವಾಗಿ ಮಾಡುತ್ತೇವೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ.

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ.. ಸಂಸದ ಅಣ್ಣಾಸಾಹೇಬ ಜೊಲ್ಲೆ

ಹುದಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಹದಿನೈದು ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ. ಈಗಾಗಲೇ ಗೋಕಾಕ್‌ನ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಗೋಕಾಕ್​ ಸೇರಿ ಅಥಣಿ,ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವು‌ ಸಾಧಿಸ್ತಾರೆ ಎಂದರು.

ಉಪಚುನಾವಣೆ ಘೋಷಣೆಯಾಗುವ ಮುನ್ನವೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲ ಸಂಸದರು ಪಾದಯಾತ್ರೆ ಮಾಡಬೇಕೆಂದು ಆದೇಶ ಹೊರಡಿಸಿದ್ದಾರೆ‌. ಉಪಚುನಾವಣೆ ಹಾಗೂ ಪಾದಯಾತ್ರೆ ಏಕಕಾಲಕ್ಕೆ ಬಂದಿದ್ದು ಕೋ ಇನ್ಸಿಡೆಂಟ್‌ ಎಂದರು. ಇನ್ನು,ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದು ಕೋ ಇನ್ಸಿಡೆಂಟ್‌. ಬಿಜೆಪಿ ಪಕ್ಷ ನನಗೆ ಯಾವ ಜವಾಬ್ದಾರಿ ಕೊಟ್ಟರೂ ನಾನು ಅದನ್ನು ಸ್ವೀಕರಿಸಲು ಸಿದ್ದನಿದ್ದೇನೆ ಎಂದರು.

ABOUT THE AUTHOR

...view details