ಬೆಳಗಾವಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ರೀತಿ ಹೋಲುವ ಅನುಮಾನಾಸ್ಪದ ವಸ್ತು ಪತ್ತೆ ಹಿನ್ನಲೆಯಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.
ಮಂಗಳೂರಿನಲ್ಲಿ ಬಾಂಬ್ ರೀತಿಯ ವಸ್ತು ಪತ್ತೆ ಹಿನ್ನೆಲೆ.. ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ - ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ
ಏರ್‌ಪೋರ್ಟ್‌ನೊಳಗೆ ತೆರಳುವ ಪ್ರತಿ ವಾಹನಗಳನ್ನೂ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಶ್ವಾನ ಹಾಗೂ ಬಾಂಬ್ ಪತ್ತೆ ದಳದ ಸಿಬ್ಬಂದಿ ಎಲ್ಲ ವಾಹನಗಳನ್ನೂ ಪರಿಶೀಲಿಸುತ್ತಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ ವಾಹನಗಳ ತಪಾಸಣೆ..
ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿರುವ ಏರ್ಪೋರ್ಟ್ಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.ಏರ್‌ಪೋರ್ಟ್‌ನೊಳಗೆ ತೆರಳುವ ಪ್ರತಿ ವಾಹನಗಳನ್ನೂ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಶ್ವಾನ ಹಾಗೂ ಬಾಂಬ್ ಪತ್ತೆ ದಳದ ಸಿಬ್ಬಂದಿ ಎಲ್ಲ ವಾಹನಗಳನ್ನೂ ಪರಿಶೀಲಿಸುತ್ತಿದ್ದಾರೆ.