ಬೆಳಗಾವಿ :ರಾಜ್ಯದಲ್ಲಿ ಜನವರಿ 1ರಿಂದ ಜೋಳ, ಭತ್ತ, ರಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ ಕತ್ತಿ ಸದನಕ್ಕೆ ಮಾಹಿತಿ ನೀಡಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು, ಅಕಾಲಿಕ ಮಳೆಯಿಂದ ಖರೀದಿ ಕೇಂದ್ರಗಳನ್ನು ಆರಂಭಿಸಿಲ್ಲ. ಜನವರಿ 1ರಿಂದ ಜೋಳ, ಭತ್ತ, ರಾಗಿ ಖರೀದಿ ಕೇಂದ್ರ ಆರಂಭಿಸುವ ಚಿಂತನೆ ಸರ್ಕಾರದ ಮುಂದಿದೆ. ಇದಕ್ಕಾಗಿ ಇಲಾಖೆ ಈಗಾಗಲೇ ಸಿದ್ಧತೆಯಲ್ಲಿ ತೊಡಗಿದೆ ಎಂದರು.
ಈಗಾಗಲೇ ನೆರೆಯ ರಾಜ್ಯಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು, ರಾಜ್ಯ ಹಿಂದೆ ಬಿದ್ದಿದೆ. ಇದರಿಂದ ಜೋಳ, ಭತ್ತ, ರಾಗಿ ಬೆಳೆಗಾರರಿಗೆ ತೊಂದರೆ ಆಗಲಿದೆ. ತಕ್ಷಣವೇ ಖರೀದಿ ಕೇಂದ್ರ ಆರಂಭಿಸಬೇಕು.