ಬೆಳಗಾವಿ :ಬಸವಣ್ಣನವರ ಅನುಭವ ಮಂಟಪ ವಿಶ್ವದ ಮೊದಲ ಸಂಸತ್ತು ಆಗಿತ್ತು. ಇದೇ ಅನುಭವ ಮಂಟಪ ಇಂದು ಪೀರ್ ಪಾಶಾ ಬಂಗ್ಲೆ ಆಗಿದೆ. ಇದನ್ನು ನೋಡಿ ನಾವು ಸುಮ್ಮನೆ ಕುಳಿತರೆ ಹೇಗೆ? ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನುಭವ ಮಂಟಪವನ್ನು ತನ್ನ ಸುಪರ್ದಿಗೆ ತೆಗೆದುಕೊಂಡು ಅಭಿವೃದ್ಧಿಪಡಿಸಬೇಕು. ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ಸಾಕಷ್ಟು ಶ್ರಮವಹಿಸುತ್ತಿದೆ. ಸರ್ಕಾರ ಕಾರ್ಯವನ್ನು ಶ್ಲಾಘಿಸುವ ಜೊತೆಗೆ ಅಭಿನಂದಿಸುತ್ತೇವೆ. ಆದರೆ, ಮೂಲ ಅನುಭವ ಮಂಟಪ ಅಭಿವೃದ್ಧಿ ಮಾಡಿದರೆ ಒಳ್ಳೆಯದಲ್ಲವೇ? ಎಂದರು.
ಬಸವಣ್ಣನವರ ಅನುಭವ ಮಂಟಪ ಪೀರಭಾಷಾ ಬಂಗ್ಲೆ ಆಗಿದೆ ಎಂದು ಆರೋಪಿಸಿದ ಹುಕ್ಕೇರಿ ಹಿರೇಮಠದ ಸ್ವಾಮೀಜಿಗಳು.. ಮುಸ್ಲಿಂ ಬಾಂಧವರು ಸೌಹಾರ್ದತೆಯಿಂದ ಚರ್ಚಿಸಿ ಮೂಲ ಅನುಭವ ಮಂಟಪ ಬಿಟ್ಟುಕೊಡಬೇಕು. ಈ ಕುರಿತು ವೀರಶೈವ ಲಿಂಗಾಯತ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಕಂಕಣವಾಡಿ ವಿಶೇಷ ಗಮನ ಹರಿಸುತ್ತಿದ್ದಾರೆ.
ಎಲ್ಲ ಸ್ವಾಮೀಜಿಗಳನ್ನು ಸೇರಿಸಿ ಜೂನ್ 12ರಂದು ಅನುಭವ ಮಂಟಪದ ಕಡೆಗೆ ಕರೆದೊಯ್ಯುತ್ತಿದ್ದಾರೆ. ಅದಕ್ಕೂ ಮೊದಲೇ ರಾಜ್ಯ ಸರ್ಕಾರ ಎಚ್ಚೆತ್ತು ಮೂಲ ಅನುಭವ ಮಂಟಪ ಅಭಿವೃದ್ಧಿಪಡಿಸಲು ಕ್ರಮವಹಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಹೆಡಗೇವಾರ್ ಯಾರು?, ಏನು ಮಾಡಿದ ಅವನು?: ಮಲ್ಲಿಕಾರ್ಜುನ ಖರ್ಗೆ ಕಿಡಿ