ಚಿಕ್ಕೋಡಿ/ಬೆಳಗಾವಿ:ಚಿಕ್ಕೋಡಿ ಉಪವಿಭಾಗದ ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕಿನ ಐವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಭರತೇಶ ಪ್ರೌಢ ಶಾಲೆ ವಿದ್ಯಾರ್ಥಿನಿ ಗಾಯತ್ರಿ ತುಕಾರಾಮ ಮರಾಠೆ, ವಿ ಎಂ ಕತ್ತಿ ಪ್ರೌಢ ಶಾಲೆ ವಿದ್ಯಾರ್ಥಿನಿ ಶಿಲ್ಪಾ ಭಸ್ತವಾಡೆ ಹಾಗೂ ಶಿರಗೊನ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿ ವಿನಯ ಮಹೇಶ ಹಿರೇಮಠ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಈಟಿವಿ ಭಾರತಕ್ಕೆ ಮಾಹಿತಿ ನೀಡಿದರು.