ಜಲ ಜೀವನ್ ಮಿಷನ್ ಯೋಜನೆ ಶೀಘ್ರ ಅನುಷ್ಠಾನ: ಪ್ರಗತಿ ಪರಿಶೀಲನೆಗಾಗಿ ಉನ್ನತ ಮಟ್ಟದ ಸಮಿತಿ ರಚನೆ - ಉನ್ನತ ಮಟ್ಟದ ಸಮಿತಿ
ಕೇಂದ್ರ ಪುರಸ್ಕೃತ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯನ್ನು ತೀವ್ರಗತಿಯಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಪ್ರಗತಿ ಪರಿಶೀಲನೆ ನಡೆಸಲು ಅನುವಾಗುವಂತೆ ಸಿಎಂ ನೇತೃತ್ವದಲ್ಲಿ 12 ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ.
ಬೆಂಗಳೂರು:ಕೇಂದ್ರ ಪುರಸ್ಕೃತ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯನ್ನು ತೀವ್ರಗತಿಯಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಪ್ರಗತಿ ಪರಿಶೀಲನೆ ನಡೆಸಲು ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಸರ್ಕಾರ ಅದೇಶ ಹೊರಡಿಸಲಾಗಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮುಖ್ಯ ಇಂಜಿನಿಯರ್ ಜಲ ಜೀವನ್ ಮಿಷನ್ ಯೋಜನೆಯನ್ನು ತೀವ್ರಗತಿಯಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಪ್ರಗತಿ ಪರಿಶೀಲನೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸುವ ಅಗತ್ಯತೆ ಬಗ್ಗೆ ಕೋರಿದ್ದರು.
ಈ ಹಿನ್ನೆಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯನ್ನು ತೀವ್ರಗತಿಯಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಪ್ರಗತಿ ಪರಿಶೀಲನೆ ನಡೆಸಲು ಅನುವಾಗುವಂತೆ ಸಿಎಂ ನೇತೃತ್ವದಲ್ಲಿ 12 ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಜಲ ಜೀವನ್ ಮಿಷನ್ ಯೋಜನೆ ಮನೆ ಮನೆಗೆ ನಳ ನೀರು ಪೂರೈಸುವ ಯೋಜನೆಯಾಗಿದೆ. ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ ಒದಗಿಸಲಾಗಿದೆ. 2021-22ರಲ್ಲಿ 25.17 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿ ಹೊಂದಲಾಗಿದೆ.
ಸಿಎಂ ಉನ್ನತಮಟ್ಟದ ಸಮಿತಿಯ ಅಧ್ಯಕ್ಷರಾಗಿದ್ದರೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿ, ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸದಸ್ಯರಾಗಿ ನೇಮಕ ಮಾಡಲಾಗಿದೆ.