ಕರ್ನಾಟಕ

karnataka

ETV Bharat / city

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಬದ್ಧ, ಎಂಇಎಸ್ ಪುಂಡಾಟಿಕೆ ಸಹಿಸಲ್ಲ : ಸಿಎಂ ಬೊಮ್ಮಾಯಿ - cm reaction on mes attack

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಇಂದು ಚರ್ಚೆ ನಡೆಯಲಿದೆ. ಉಭಯ ರಾಜ್ಯಗಳ ಡಿಜಿ, ಗೃಹ ಇಲಾಖೆ ಕಾರ್ಯದರ್ಶಿ ಮಾತುಕತೆ ನಡೆಸಲಿದ್ದಾರೆ. ಅವಶ್ಯಕತೆ ಬಿದ್ದರೆ ನಾನು‌ ಮಹಾರಾಷ್ಟ್ರದ ಸಿಎಂ ಜತೆಗೆ ಮಾತನಾಡುತ್ತೇನೆ..

mes-attack-on-kannadigas
ಸಿಎಂ ಬೊಮ್ಮಾಯಿ

By

Published : Dec 18, 2021, 3:08 PM IST

ಬೆಳಗಾವಿ :ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ನಾವು ಸಿದ್ಧರಿದ್ದೇವೆ. ಗಡಿಯಲ್ಲಿ ಎಂಇಎಸ್ ಕಿಡಗೇಡಿಗಳ ಪುಂಡಾಟಿಕೆಯನ್ನು ನಾವು ಸಹಿಸಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದಾಳಿ ಕುರಿತು ಸಿಎಂ ಪ್ರತಿಕ್ರಿಯೆ ನೀಡಿರುವುದು..

MES attack on Kannadigas : ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ತಡರಾತ್ರಿ ನಡೆದ ಗಲಾಟೆಯ ಬಗ್ಗೆ ಸಂಪೂರ್ಣ ಮಾಹಿತಿ ನನಗಿದೆ. ಪೊಲೀಸರು ಎಲ್ಲ ರೀತಿಯ ಕಾನೂನು ಕ್ರಮಕೈಗೊಂಡಿದ್ದಾರೆ. ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ.

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಇಂದು ಚರ್ಚೆ ನಡೆಯಲಿದೆ. ಉಭಯ ರಾಜ್ಯಗಳ ಡಿಜಿ, ಗೃಹ ಇಲಾಖೆ ಕಾರ್ಯದರ್ಶಿ ಮಾತುಕತೆ ನಡೆಸಲಿದ್ದಾರೆ. ಅವಶ್ಯಕತೆ ಬಿದ್ದರೆ ನಾನು‌ ಮಹಾರಾಷ್ಟ್ರದ ಸಿಎಂ ಜತೆಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಬೆಳಗಾವಿ ಎಂಇಎಸ್​​ ಗಲಾಟೆ :ಘಟನೆಯಲ್ಲಿ ಪೊಲೀಸ್ ವೈಫಲ್ಯದ ಪ್ರಶ್ನೆ ಇಲ್ಲ. ರಾತ್ರಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ. ರಾತ್ರಿ ಗಲಾಟೆ ಮಾಡಿದ್ದು ಯಾವ ಪುರುಷಾರ್ಥ? ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಗೃಹ ಸಚಿವರಿಗೆ ಗಲಾಟೆ ಬಗ್ಗೆ ಹಾಗೂ ತನಿಖೆ ಪ್ರಗತಿ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಿದ್ದೇನೆ ಎಂದರು.

ABOUT THE AUTHOR

...view details