ಕರ್ನಾಟಕ

karnataka

ETV Bharat / city

ನೆರೆ ಪರಿಹಾರಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ - ಜಮಖಂಡಿಯಿಂದ ಪಾದಯಾತ್ರೆ

ಕೇಂದ್ರ ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿಂದು ಕಾಂಗ್ರೆಸ್​ ವತಿಯಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದೆ.

ನೆರೆ ಪರಿಹಾರಕ್ಕಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ

By

Published : Sep 24, 2019, 2:55 PM IST

ಬೆಳಗಾವಿ:ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಕುಂದಾನಗರಿಯಲ್ಲಿಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ನೆರೆ ಪರಿಹಾರಕ್ಕಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ

ಅಲ್ಲದೇ, ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಬಾಗಲಕೋಟೆಯಿಂದ ಬೆಳಗಾವಿವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಇಂದು ಬೆಳಗಾವಿಯಲ್ಲಿ ಮುಕ್ತಾಯವಾಗಲಿದೆ. ಪ್ರವಾಹಕ್ಕೆ ತುತ್ತಾಗಿದ್ದ ಬಾಗಲಕೋಟೆ ಜಿಲ್ಲೆಗೆ ಕೇಂದ್ರ ಕರ್ಸಾರ ಪ್ರವಾಹ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ, ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಸೆ.21ರಂದು ಜಮಖಂಡಿಯಿಂದ ಪಾದಯಾತ್ರೆ ಹೊರಟಿತ್ತು.

ಇನ್ನು, ಬೆಳಗಾವಿಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ, ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದೆ.

ABOUT THE AUTHOR

...view details