ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕೆದಕಿದ್ದ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕರ್ನಾಟಕ ಗಡಿಭಾಗವನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ವಿವಾದಿತ ನಕ್ಷೆ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತ ವಿನಾಯಕ ಭೋವಿ ನೀಡಿದ ದೂರಿನ ಮೇರೆಗೆ ಮಾಳಮಾರುತಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈತ ಮಾಡಿದ್ದೇನು? ಐಟಿ ಆ್ಯಕ್ಟ್ 2000(U/s-66), ಐಪಿಸಿ ಸೆಕ್ಷನ್ 1860(U/s-153B)ರಡಿ ಕೇಸ್ ದಾಖಲಾಗಿದೆ. ವಿವಾದಿತ ಪೋಸ್ಟ್, ವಿಡಿಯೋ ಹಾಕಿ ಗಡಿ ತಗಾದೆ ತೆಗೆದಿದ್ದ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ, ಭಾಲ್ಕಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ ಗ್ರಾಫಿಕ್ ವಿಡಿಯೋ, ಫೋಟೋ ಹಂಚಿಕೊಂಡಿದ್ದಾನೆ.