ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 1 ರಿಂದ 9ನೇ ತರಗತಿವರೆಗಿನ ಶಾಲೆಗಳನ್ನು ಒಂದು ವಾರ ಬಂದ್ ಮಾಡಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.
ಮಕ್ಕಳಲ್ಲಿ ಕೊರೊನಾ ಸೋಂಕು ಉಲ್ಬಣ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಕೋವಿಡ್ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಸಭೆ ಮಾಡಿದ್ದೇನೆ. ಡಿಹೆಚ್‌ಒ, ಡಿಡಿಪಿಐಗಳ ಜೊತೆಗೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಜ.11 ರಿಂದ 18ರವರೆಗೆ 1 ರಿಂದ 9 ತರಗತಿಗಳ ಶಾಲೆಗಳ ಬಂದ್‌ಗೆ ಸಲಹೆ ಬಂದಿದೆ ಎಂದರು.