ಬೆಳಗಾವಿ: ನಗರದ ಬೀಮ್ಸ್ ತುರ್ತು ನಿಗಾ ಘಟಕದಲ್ಲಿ ಕೊರೊನಾ ರೋಗಿ ಸಾವನ್ನಪ್ಪಿದ್ದು, ಮೃತ ವ್ಯಕ್ತಿಯ ಸಂಬಂಧಿಕರು ಆ್ಯಂಬುಲೆನ್ಸ್ ವಾಹನಕ್ಕೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೀಮ್ಸ್‌ನಲ್ಲಿ ಕೊರೊನಾ ಸೋಂಕಿತ ಸಾವು: ಆ್ಯಂಬುಲೆನ್ಸ್ಗೆ ಬೆಂಕಿ ಹಚ್ಚಿ ಸಂಬಂಧಿಕರ ಆಕ್ರೋಶ - belgaum latest news
ಬೆಳಗಾವಿಯ ಬೀಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಕೊರೊನಾ ರೋಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕೋಪಗೊಂಡ ಮೃತ ವ್ಯಕ್ತಿಯ ಸಂಬಂಧಿಕರು ಆ್ಯಂಬುಲೆನ್ಸ್ ವಾಹನಕ್ಕೆ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ.
![ಬೀಮ್ಸ್‌ನಲ್ಲಿ ಕೊರೊನಾ ಸೋಂಕಿತ ಸಾವು: ಆ್ಯಂಬುಲೆನ್ಸ್ಗೆ ಬೆಂಕಿ ಹಚ್ಚಿ ಸಂಬಂಧಿಕರ ಆಕ್ರೋಶ Corona-infected death in Beams.. Relatives who set fire to an ambulance](https://etvbharatimages.akamaized.net/etvbharat/prod-images/768-512-8134289-thumbnail-3x2-newss.jpg)
ನಗರದ ಕ್ಯಾಂಪ್ ಪ್ರದೇಶದ ಕೊರೊನಾ ಸೋಂಕಿತ ಜುಲೈ 19ರಂದು ಬೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದರಿಂದ ಕೋಪಗೊಂಡ ಮೃತ ವ್ಯಕ್ತಿಯ ಸಂಬಂಧಿಕರು ಆ್ಯಂಬುಲೆನ್ಸ್ಗೆ ಬೆಂಕಿ ಹಚ್ಚಿ, ಪೊಲೀಸ್ ಜೀಪ್ ಹಾಗು ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಇದರ ಜೊತೆಗೆ ಬೀಮ್ಸ್ ಆಸ್ಪತ್ರೆಯೊಳಗೆ ನುಗ್ಗಿದ ಕೆಲವರು ಸಿಬ್ಬಂದಿಯ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಆ್ಯಂಬುಲೆನ್ಸ್ಗೆ ಬೆಂಕಿ ಬಿದ್ದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಎಸ್ಪಿ ಲಕ್ಷಣ ನಿಂಬರಗಿ, ನಗರ ಪೊಲೀಸ್ ಆಯುಕ್ತ ತ್ಯಾಗರಾಜನ್ ಪರಿಶೀಲನೆ ನಡೆಸುತ್ತಿದ್ದಾರೆ.