ಬೆಳಗಾವಿ: ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ನಿಷೇಧಿತ ಪ್ರದೇಶ (ಕಂಟೈನ್ಮೆಂಟ್ ಝೋನ್) ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.
ಗ್ರಾಮದ ನಿವಾಸಿಗಳ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಿಷೇಧಿತ ಪ್ರದೇಶದ ಹೊರಗಿನ 2 ಕಿ.ಮೀ. ವ್ಯಾಪ್ತಿಯನ್ನು ಬಫರ್ ಝೋನ್ ಎಂದು ಘೋಷಿಸಲಾಗಿದೆ. ಗ್ರಾಮದ 3 ಕಿ.ಮೀ. ವ್ಯಾಪ್ತಿಯಲ್ಲಿ ಓಡಾಡುವುದು, ವಾಹನಗಳ ಮೂಲಕ ಒಳ ಪ್ರವೇಶಿಸುವುದು ಹಾಗೂ ನಿರ್ಗಮಿಸುವುದನ್ನು ನಿರ್ಬಂಧಿಸಲಾಗಿದೆ.