ಅಥಣಿ(ಬೆಳಗಾವಿ):ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಆತಂಕ ಹೆಚ್ಚಾದ ಹಿನ್ನೆಲೆ ಅಥಣಿಯಿಂದ ಮಹಾರಾಷ್ಟ್ರಕ್ಕೆ ಕರ್ನಾಟಕ ಸಾರಿಗೆ ಇಲಾಖೆ ಬಸ್ ಸಂಚಾರವನ್ನು ಬಂದ್ ಮಾಡಿದೆ.
ಮಹಾರಾಷ್ಟ್ರದಲ್ಲಿ ಮಹಾಮಾರಿ ತನ್ನ ಕಬಂಧಬಾಹುಗಳನ್ನು ಚಾಚುತ್ತಲೇ ಇದ್ದು, ಸೋಂಕಿತರ ಸಂಖ್ಯೆ 50 ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ರಾಜ್ಯದ ನೂರಾರು ಬಸ್ಗಳು ಸಂಚರಿಸುತ್ತಿರುವುದರಿಂದ ಇಲ್ಲಿನ ಜನರಲ್ಲಿ ಆತಂಕ ಮನೆಮಾಡಿರುವ ಕುರಿತು ಈಟಿವಿ ಭಾರತ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಬಳಿಕ ಎಚ್ಚೆತ್ತುಕೊಂಡ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ಗಳ ಸಂಚಾರವನ್ನು ಇಂದಿನಿಂದ ಬಂದ್ ಮಾಡಿದ್ದಾರೆ.
ಓದಿ:ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು: ಆತಂಕದಲ್ಲಿ ಅಥಣಿ ಜನತೆ
ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಸಾರಿಗೆ ಸಚಿವರ ಸ್ವಕ್ಷೇತ್ರ ಅಥಣಿಯಲ್ಲಿ ನಿರ್ವಾಹಕ ಮತ್ತು ಚಾಲಕರಲ್ಲಿ ಕೊರೊನಾ ವೈರಸ್ ಭೀತಿ ಉಂಟಾಗಿದೆ. ದೇಶದಲ್ಲಿ ಮಹಾರಾಷ್ಟ್ರ ರಾಜ್ಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ನಂಬರ್ 1 ಸ್ಥಾನದಲ್ಲಿ ಇರುವುದರಿಂದ ಪಕ್ಕದ ಅಥಣಿ ಜನತೆ ಅಕ್ಷರಶಃ ತತ್ತರಿಸಿದ್ದಾರೆ ಎಂದು ವರದಿಯಲ್ಲಿ ವಿವರಿಸಲಾಗಿತ್ತು.
ಅಥಣಿ ಟು ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ ಇದೀಗ ಅಧಿಕಾರಿಗಳು ಎಚ್ಚೆತ್ತುಕೊಂಡು ಮಹಾರಾಷ್ಟ್ರಕ್ಕೆ ಹೋಗುವ ಬಸ್ಗಳನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಈಟಿವಿ ಭಾರತ ವರದಿಗೆ ಸ್ಪಂದಿಸಿರುವ ಅಧಿಕಾರಿಗಳಿಗೆ ಧನ್ಯವಾದ. ಸಾರ್ವಜನಿಕರು ಮತ್ತು ರಾಜ್ಯದ ಹಿತದೃಷ್ಟಿಯಿಂದ ಅವರು ತೆಗೆದುಕೊಂಡಿರುವ ಕ್ರಮ ಶ್ಲಾಘನೀಯ.