ಬೆಳಗಾವಿ: ಜಿಲ್ಲೆಯಲ್ಲಿ ಇಂದು 8 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಬೆಳಗಾವಿಯಲ್ಲಿ ಇಂದು 8 ಜನರಿಗೆ ಕೊರೊನಾ ಪಾಸಿಟಿವ್..ನಾಲ್ವರು ಗುಣಮುಖ - Belgaum corona case
ಬೆಳಗಾವಿ ಜಿಲ್ಲೆಯಲ್ಲಿ ಇಂದು 8 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 326ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಹುಕ್ಕೇರಿ ತಾಲೂಕಿನ 4, ಚಿಕ್ಕೋಡಿ ತಾಲೂಕಿನ 2, ಕಾಕತಿ ಹಾಗೂ ಬೆಳಗಾವಿಯ ಸದಾಶಿವನಗರದ ತಲಾ ಒಬ್ಬೊಬ್ಬರಲ್ಲಿ ಕೊರೊನಾ ಸೋಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 326ಕ್ಕೆ ಏರಿಕೆಯಾಗಿದೆ. ಇನ್ನು, ಬೆಳಗಾವಿಯ ಕಲಬಾವಿ, ಸವದತ್ತಿ ಹಾಗೂ ಹುಕ್ಕೇರಿಯ ನಾಲ್ಕು ವರ್ಷದ ಬಾಲಕ ಸೇರಿ ನಾಲ್ವರು ಸೋಂಕಿತರು ಗುಣಮುಖರಾಗಿ ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 326 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 300 ಜನ ಸೋಂಕಿತರು ಆಸ್ಪತ್ರೆಯಿಂದ ಡಿಸ್ವಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಓರ್ವ ವ್ಯಕ್ತಿ ಮೃತಪಟ್ಟಿದ್ದು, 25 ಪ್ರಕರಣಗಳು ಸಕ್ರಿಯವಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.