ಬೆಳಗಾವಿ:ಮಹಾರಾಷ್ಟ್ರದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ಇಂದು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ ನಡೆಸಿದ್ದೇವೆ. ಎಸ್‌ಪಿ, ಪೊಲೀಸ್ ಕಮಿಷನರ್ ಡಿಹೆಚ್‌ಒ ಎಲ್ಲರೂ ಸೇರಿ ಚರ್ಚೆ ಮಾಡಿದ್ದೇವೆ ಎಂದರು.
ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ನೆರೆ ರಾಜ್ಯಗಳಾದ ಮಹಾರಾಷ್ಟ್ರ ಗೋವಾಗೆ ಖಾಸಗಿ ಹಾಗೂ ಸರ್ಕಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದ್ದು, 12 ಪ್ಲಸ್ ಒನ್ ಪ್ಯಾಸೆಂಜರ್ ಕ್ಯಾಬ್ ಆಗಮನ ನಿರ್ಗಮನವನ್ನು ಸಹ ತಕ್ಷಣದಿಂದ ಜಾರಿ ಬರುವಂತೆ ನಿಷೇಧಿಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಬೆಳಗಾವಿಯ ಇಬ್ಬರ ಗಂಟಲು ದ್ರವ ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ನಾಳೆಯವರೆಗೆ ವರದಿ ಬರುವ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದ್ದಾರೆ.