ಬೆಳಗಾವಿ:ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಜೊತೆಗೆ ಸಾವಿನ ಪ್ರಮಾಣ ಹೆಚ್ಚುತ್ತಲೇ ಇದ್ದರೂ ಕೂಡ ಜನರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಗುಂಪು ಸೇರುತ್ತಿದ್ದಾರೆ.
ಬೆಳಗಾವಿಯ ಹಣ್ಣಿನ ಮಾರುಕಟ್ಟೆಯಲ್ಲಿ ಜನಜಂಗುಳಿ ಇಲ್ಲಿನ ಗಾಂಧಿನಗರದಲ್ಲಿರುವ ಹಣ್ಣಿನ ಮಾರುಕಟ್ಟೆಯಲ್ಲಿ ಜನರು ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಮತ್ತಷ್ಟು ಕೊರೊನಾ ಸೋಂಕು ಹರಡುವ ಭೀತಿ ಹೆಚ್ಚಾಗಿದೆ.
ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನ:
ಗಾಂಧಿನಗರದ ಮಾರ್ಕೆಟ್ನಲ್ಲಿ ಸಾಮಾಜಿಕ ಅಂತರ ಮರೆತು ವ್ಯಾಪಾರ ನಡೆಸುತ್ತಿರುವವರ ಚಿತ್ರೀಕರಣ ಮಾಡುತ್ತಿದ್ದ ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಾಳಮಾರುತಿ ಸಿಪಿಐ ಸುನೀಲ ಪಾಟೀಲ್, ಪಿಎಸ್ಐ ಹೊನ್ನಪ್ಪ ತಳವಾರ ಆರೋಪಿಗಳನ್ನು ವಶಕ್ಕೆ ಪಡೆದರು. ಬಳಿಕ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ಬಂದ್ ಮಾಡಿಸಿದರು.
ಇದನ್ನೂ ಓದಿ:ರಸ್ತೆಯಲ್ಲೇ ಯುವಕನ ಜೀವನ್ಮರಣದ ಹೋರಾಟ: ವಿಡಿಯೋ ಮಾಡುತ್ತಿದ್ದ ಜನ ನೆರವಿಗೆ ಧಾವಿಸಲಿಲ್ಲ!