ಕರ್ನಾಟಕ

karnataka

ETV Bharat / city

ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್; ಬೆಳಗಾವಿ ಡಿಸಿ ಖಡಕ್ ಎಚ್ಚರಿಕೆ

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

Criminal case for violation covid-19 guidelines: Belagavi DC warns to people
ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್; ಬೆಳಗಾವಿ ಡಿಸಿ ಖಡಕ್ ಎಚ್ಚರಿಕೆ

By

Published : Apr 22, 2021, 3:40 AM IST

ಬೆಳಗಾವಿ: ಸರ್ಕಾರದ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಮದುವೆ ಮತ್ತಿತರ ನಿಗದಿತ ಸಮಾರಂಭಗಳಿಗೆ ಮಾತ್ರ ಆಯಾ ತಾಲ್ಲೂಕುಗಳ ತಹಶೀಲ್ದಾರರು ಅನುಮತಿ ನೀಡಲಿದ್ದಾರೆ. ಅನುಮತಿ ಪಡೆಯದೇ ಅಥವಾ ಅನುಮತಿ ಪಡೆದುಕೊಂಡು ನಿಯಮಾವಳಿ ಉಲ್ಲಂಘಿಸಿ ಸಮಾರಂಭ ನಡೆಸುವವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಇದರಲ್ಲಿ ಕೆಲವು ಷರತ್ತುಗಳ ಮೇರೆಗೆ ಅನುಮತಿಸಲಾಗಿರುವ ಮದುವೆ ಮತ್ತಿತರ ಸಮಾರಂಭಗಳಿಗೆ ಮುಂಚಿತವಾಗಿಯೇ ಆಯಾ ತಾಲ್ಲೂಕುಗಳ ತಹಶೀಲ್ದಾರರಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ: ಉದಾಸೀನ ಮಾಡದೆ ಕೊರೊನಾ ನಿಯಂತ್ರಣಕ್ಕೆ ಸಿದ್ಧತೆ ಮಾಡಿ;ಹಾವೇರಿ ಜಿಲ್ಲಾಡಳಿತಕ್ಕೆ ಬಸವರಾಜ ಬೊಮ್ಮಾಯಿ ತಾಕೀತು!

ನಿಯಮ ಉಲ್ಲಂಘಿಸಿದರೆ ಸಂಘಟಕರೇ ಹೊಣೆ

ಅನುಮತಿ ನೀಡುವಾಗ ವಿಧಿಸಲಾಗಿರುವ ಷರತ್ತುಗಳನ್ನು ಸಂಘಟಕರು ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ಷರತ್ತುಗಳನ್ನು ಉಲ್ಲಂಘಿಸಿ ಸಮಾರಂಭಗಳಲ್ಲಿ ಹೆಚ್ಚು ಜನರನ್ನು ಸೇರಿಸಿದರೆ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಸೇರಿದಂತೆ ಇತರೆ ನಿಯಮಗಳ ಪ್ರಕಾರ ಕಠಿಣವಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ನಿಯಮಗಳನ್ನು ಉಲ್ಲಂಘಿಸಿದರೆ ಮದುವೆ ಮತ್ತಿತರ ಸಮಾರಂಭಗಳ ಸಂಘಟಕರು ಮಾತ್ರವಲ್ಲದೇ ಅಂತಹ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸುವ ಕಲ್ಯಾಣ ಮಂಟಪಗಳು, ಛತ್ರಗಳು, ಸಮುದಾಯ‌ಭವನ ಮಾಲೀಕರು, ವ್ಯವಸ್ಥಾಪಕರನ್ನೂ ಹೊಣೆ ಮಾಡಿ ಅವರ ಮೇಲೂ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಮದುವೆ, ಸಮಾರಂಭಗಳ ಮೇಲೆ ಕ್ಯಾಮೆರಾ ನಿಗಾ

ಕೋವಿಡ್-19 ಮಾರ್ಗಸೂಚಿ ಪ್ರಕಾರ ತಹಶೀಲ್ದಾರರಿಂದ ಅನುಮತಿ ಪಡೆದು ನಡೆಸಲಾಗುವ ಮದುವೆ ಮತ್ತಿತರ ಸಮಾರಂಭಗಳ ಮೇಲೆ ನಿಗಾ ವಹಿಸಲು ಆಯಾ ತಾಲ್ಲೂಕುಗಳಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅನುಮತಿ ಪಡೆದ ಸಮಾರಂಭಗಳ ಮೇಲೆ ನೋಡಲ್ ಅಧಿಕಾರಿಗಳು, ಒಬ್ಬ ವಿಡಿಯೋಗ್ರಾಫರ್ ಸಮೇತ ನಿಗಾ ವಹಿಸುತ್ತಾರೆ. ಈ ಸಂದರ್ಭದಲ್ಲಿ ಷರತ್ತುಗಳು ಹಾಗೂ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ತಕ್ಷಣವೇ ಸಮಾರಂಭಗಳನ್ನು ತಡೆಹಿಡಿಯಲಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ABOUT THE AUTHOR

...view details