ಕರ್ನಾಟಕ

karnataka

ETV Bharat / city

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆಗೆ ದಿನಗಣನೆ: ಸವದಿ, ಜೊಲ್ಲೆ, ಕತ್ತಿ ಸಹೋದರರ ‌ಗೌಪ್ಯಸಭೆ - ಡಿಸಿಸಿ ಬ್ಯಾಂಕ್​ ಚುನಾವಣೆ

ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಅಥಣಿಯ ಪಟ್ಟಣ ಪ್ರವಾಸಿ ಮಂದಿರದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಉಮೇಶ್​ ಕತ್ತಿ ಹಾಗೂ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾ ಸಾಹೇಬ ಜೋಲ್ಲೆ ಸೇರಿದಂತೆ ಇನ್ನಿತರರು ಗೌಪ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

dcc-bank-prasident-election-savadi-jolle-katti-brother-meeting
ಸವದಿ ಜೋಲ್ಲೆ ಕತ್ತಿ

By

Published : Nov 12, 2020, 5:07 PM IST

ಅಥಣಿ: ಪ್ರತಿಷ್ಠಿತ ಬೆಳಗಾವಿಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನ. 14ರಂದು ನಡೆಯಲಿದ್ದು, ಗದ್ದುಗೆಗಾಗಿ ನಿರ್ದೇಶಕರ ಮಧ್ಯೆ ಕಸರತ್ತು ತೀವ್ರಗೊಂಡಿವೆ.

ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಉಮೇಶ್​ ಕತ್ತಿ ಮತ್ತು ರಮೇಶ್ ಕತ್ತಿ ಹಾಗೂ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ‌ ಸೇರಿದಂತೆ ಇನ್ನಿತರರು ಗೌಪ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಜಿಲ್ಲಾ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.

ಸವದಿ, ಜೊಲ್ಲೆ, ಕತ್ತಿ ಸಹೋದರರ ‌ಗೌಪ್ಯಸಭೆ

ಅಧ್ಯಕ್ಷ ಸ್ಥಾನದ ಮೇಲೆ ಈ ಸಲವೂ ರಮೇಶ್ ಕತ್ತಿ ಕಣ್ಣಿಟ್ಟಿದ್ದಾರೆ. ಈ ಕಾರಣಕ್ಕೆ ಸಹೋದರ ಉಮೇಶ್​ ಕತ್ತಿ ಮೇಲೆ ಒತ್ತಡ ಹೇರುತ್ತಿರುವ ರಮೇಶ್ ಕತ್ತಿ ಹುದ್ದೆಯಲ್ಲಿ ಮುಂದುವರೆಯಲು ಕಸರತ್ತು ಆರಂಭಿಸಿದ್ದಾರೆ. ಅಲ್ಲದೆ ಇಂದು‌ ನಡೆದ ಸಭೆಯಲ್ಲಿ ಡಿಸಿಸಿ ಬ್ಯಾಂಕ್​ನ ಹಲವು ನಿರ್ದೇಶಕರು ಭಾಗಿಯಾಗಿದ್ದರು. ರಮೇಶ್ ಕತ್ತಿ, ಸಂಸದ ಅಣ್ಣಾಸಾಹೇಬ ಜೊಲ್ಲೆ ಕೂಡ ಸಭೆಯಲ್ಲಿದ್ದರು ಎಂದು ತಿಳಿದು ಬಂದಿದೆ.

ಇತ್ತ ಡಿಸಿಎಂ ಲಕ್ಷ್ಮಣ ಸವದಿ ತಮ್ಮ ಆಪ್ತ ಮಹಾಂತೇಶ ದೊಡ್ಡನಗೌಡರ ಅವರನ್ನು ಅಧ್ಯಕ್ಷ ಹುದ್ದೆಗೇರಿಸಲು ಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಎಲ್ಲಾ ನಾಯಕರು ಸಭೆ ನಡೆಸಿದ್ದರೂ ಗದ್ದುಗೆಗೆ ತಂತ್ರ-ಪ್ರತಿತಂತ್ರ ಮುಂದುವರೆಸಿದ್ದಾರೆ. 16 ನಿರ್ದೇಶಕ ಸ್ಥಾನ ಹೊಂದಿರುವ ಡಿಸಿಸಿ ಬ್ಯಾಂಕ್​ಗೆ 13 ಸ್ಥಾನಗಳಲ್ಲಿ ಅವಿರೋಧ ಆಯ್ಕೆ ನಡೆದಿಗಿತ್ತು. ಉಳಿದ ಮೂರು ಸ್ಥಾನಗಳಿಗೆ ನವೆಂಬರ್ 6ರಂದು ಚುನಾವಣೆ ನಡೆದಿತ್ತು. ಅದರಲ್ಲಿ ಕಮಲ ನಾಯಕರ ಬಣದ ಇಬ್ಬರು ಗೆಲುವು ದಾಖಲಿಸಿದ್ದಾರೆ.

ABOUT THE AUTHOR

...view details