ಕರ್ನಾಟಕ

karnataka

ETV Bharat / city

ಕೋವಿಡ್-19 : ಗಡಿಭಾಗದ ಚೆಕ್ ಪೋಸ್ಟ್​ಗಳಲ್ಲಿ ತಪಾಸಣೆ ಬಿಗಿಗೊಳಿಸಲು ಕಾರಜೋಳ ಸೂಚನೆ - DCM Goavinda Karjola

ಜನರ ಆರೋಗ್ಯ ರಕ್ಷಣೆಯ ಜವಾಬ್ದಾರಿಯನ್ನು ನಿಭಾಯಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಎಲ್ಲಾ ಇಲಾಖೆಯ ಅಧಿಕಾರಿಗಳು ಗಡಿಭಾಗದ ಚೆಕ್ ಪೋಸ್ಟ್ ತಪಾಸಣೆಯನ್ನು ಬಿಗಿಗೊಳಿಸಿ ಕರ್ತವ್ಯ ನಿರ್ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಕಾರಜೋಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

ಡಿಸಿಎಂ ಗೋವಿಂದ ಕಾರಜೋಳ ಸೂಚನೆ
ಡಿಸಿಎಂ ಗೋವಿಂದ ಕಾರಜೋಳ ಸೂಚನೆ

By

Published : Jun 29, 2021, 4:42 PM IST

ಬೆಳಗಾವಿ :ಕೋವಿಡ್ 19 ಮೂರನೇ ಅಲೆ ಬರಬಹುದೆಂಬ ತಜ್ಞರ ಅಭಿಪ್ರಾಯದ ಮೇರೆಗೆ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಗಡಿಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಮಹಾರಾಷ್ಟ್ರದಿಂದ ಬೆಳಗಾವಿ ಜಿಲ್ಲೆಯ ಎಲ್ಲ ಗಡಿಗಳ ಮೂಲಕ ಆಗಮಿಸುವ ಜನರನ್ನು ಕೋವಿಡ್-19 ನಿವಾರಣೆ ದೃಷ್ಟಿಯಿಂದ ಪರೀಕ್ಷೆಗೆ ಒಳಪಡಿಸುವುದು ಅತ್ಯಂತ ಕಟ್ಟುನಿಟ್ಟಿನಿಂದ ಆಗಬೇಕು. ಈ ನಿಟ್ಟಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳು (ಆರೋಗ್ಯ ಕಂದಾಯ ಶಿಕ್ಷಣ ಪೊಲೀಸ್) ಕೋವಿಡ್-19 ಕುರಿತಂತೆ ಜಾಗೃತಿ ಮೂಡಿಸಬೇಕು.

ಜನರ ಆರೋಗ್ಯ ರಕ್ಷಣೆಯ ಜವಾಬ್ದಾರಿಯನ್ನು ನಿಭಾಯಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಎಲ್ಲಾ ಇಲಾಖೆಯ ಅಧಿಕಾರಿಗಳು ಗಡಿಭಾಗದ ಚೆಕ್ ಪೋಸ್ಟ್ ತಪಾಸಣೆಯನ್ನು ಬಿಗಿಗೊಳಿಸಿ ಕರ್ತವ್ಯ ನಿರ್ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಕಾರಜೋಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು, ಕರ್ತವ್ಯಲೋಪ ಮಾಡುವಂತಹ ಅಧಿಕಾರಿಗಳಿಗೆ ಶಿಸ್ತು ಕ್ರಮವನ್ನು ಜರುಗಿಸಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದಲ್ಲದೇ ಕೋವಿಡ್ ನಿಯಂತ್ರಣಕ್ಕಾಗಿ ಪ್ರಾದೇಶಿಕ ಆಯುಕ್ತರು, ಉತ್ತರ ವಲಯದ ಐಜಿಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಕೂಡ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದ್ದಾರೆ.

ABOUT THE AUTHOR

...view details