ಬೆಳಗಾವಿ:ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಆಹಾರ ಪೂರೈಕೆ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ದಿಢೀರ್ ಹಿರಿಯ ಅಧಿಕಾರಿಗಳು ಸೇರಿ ಸಭೆ ನಡೆಸಿ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆದುಕೊಂಡು ಸಲಹೆ ಸೂಚನೆ ನೀಡಿದರು.
ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಕೊರೊನಾ ಲಸಿಕೆ ಪಡೆದವರಲ್ಲಿ ಈವರೆಗೂ ಯಾರಿಗೂ ಅನಾರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ಆದರೂ ಕೋವಿಡ್ ಸೈಡ್ ಎಫೆಕ್ಟ್ನಿಂದಲೂ ಸಾಕಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಅವರ ಸಾವು ಕೋವಿಡ್ ಮೇಲೆ ಬರುವ ಸಾಧ್ಯತೆ ಇದೆ. ಈ ಬಗ್ಗೆ ಆರೋಗ್ಯ ಇಲಾಖೆ ಗಮನಹರಿಸಬೇಕಿದೆ. ಇದಲ್ಲದೆ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಣ ವಸೂಲಿ ಆಗುತ್ತಿರುವ ಬಗ್ಗೆ ಗಮನಹರಿಸಬೇಕು ಎಂದರು.