ಚಿಕ್ಕೋಡಿ:ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾಶೀಳ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಧಾರವಾಡದ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಸತಾರಾ ಬಳಿ ಭೀಕರ ರಸ್ತೆ ಅಪಘಾತ.. ಧಾರವಾಡದ ಒಂದೇ ಕುಟುಂಬದ 6 ಮಂದಿ ಸಾವು - ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾಶೀಳ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ರಸ್ತೆ ಅಪಘಾತ ನಡೆದಿದ್ದು, ಧಾರವಾಡದ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಎರಡೂವರೆ ವರ್ಷದ ಒಬ್ಬ ಬಾಲಕ ಮತ್ತು 5 ವರ್ಷದ ಬಾಲಕಿ ಮೃತಪಟ್ಟಿದ್ದು, ಇವರು ಕರ್ನಾಟಕದ ಧಾರವಾಡದ ನಿಜಾಮೋದಿನ ಸೌದಾಗರ ಎಂಬ ಕುಟುಂಬದವರು ಎಂದು ಮಾಹಿತಿ ಲಭ್ಯವಾಗಿದೆ. ಇನ್ನು, ಘಟನೆಯಲ್ಲಿ ಕಾರು ಚಾಲಕ ಮತ್ತು ಒಂದು ಹೆಣ್ಣ ಮಗುವಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಬೋರೆಗಾಂವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಈ ಕುರಿತು ಕಾಶೀಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.