ಚಿಕ್ಕೋಡಿ:ಕಳೆದ ನಾಲ್ಕೈದು ದಿನಗಳಿಂದ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯು ನಿನ್ನೆಯಿಂದ ಸ್ವಲ್ಪ ಮಟ್ಟಿಗೆ ಕಡಿಮೆಯಾದ ಹಿನ್ನೆಲೆ, ಸತಾರ ಜಿಲ್ಲೆಯ ಕೊಯ್ನಾ ಜಲಾಶಯದ ನೀರು ಬಿಡುಗಡೆ ಪ್ರಮಾಣದಲ್ಲಿ ಇಳಿಕೆ ಮಾಡಲಾಗಿದೆ.
ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ತಗ್ಗಿದ ಮಳೆ: ಕೊಯ್ನಾ ಜಲಾಶಯದ ನೀರು ಬಿಡುಗಡೆ ಪ್ರಮಾಣದಲ್ಲಿ ಇಳಿಕೆ - ಕೊಯ್ನಾ ಜಲಾಶಯ
ಮಹಾರಾಷ್ಟ್ರದ ಸತಾರ ಜಿಲ್ಲೆಯ ಕೊಯ್ನಾ ಜಲಾಶಯದ ನೀರು ಬಿಡುಗಡೆ ಪ್ರಮಾಣದಲ್ಲಿ ಇಳಿಕೆ ಮಾಡಲಾಗಿದೆ. ನಿನ್ನೆ 50 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಕೊಯ್ನಾ ಜಲಾಶಯದಿಂದ ಬಿಡುಗಡೆ ಮಾಡಲಾಗಿತ್ತು.
ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ತಗ್ಗಿದ ಮಳೆ, ಕೊಯ್ನಾ ಜಲಾಶಯದ ನೀರು ಬಿಡುಗಡೆ ಪ್ರಮಾಣದಲ್ಲಿ ಇಳಿಕೆ
ನಿನ್ನೆ 50 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಕೊಯ್ನಾ ಜಲಾಶಯದಿಂದ ಬಿಡುಗಡೆ ಮಾಡಲಾಗಿತ್ತು. ಇಂದು ಕೂಡಾ 56 ಸಾವಿರ ಕ್ಯೂಸೆಕ್ ನೀರು ಬಿಡುವ ನಿರೀಕ್ಷೆ ಇತ್ತು. ಆದರೆ, ಕೊಯ್ನಾ ಜಲಾಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ 30 ಸಾವಿರ ಕ್ಯೂಸೆಕ್‌ಗೆ ಸತಾರ ನೀರಾವರಿ ಇಲಾಖೆ ಇಳಿಕೆ ಮಾಡಿದೆ.
105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯದಲ್ಲಿ ಸದ್ಯ 87 ಟಿಎಂಸಿ ನೀರು ಸಂಗ್ರಹವಿದೆ.
TAGGED:
ಕೊಯ್ನಾ ಜಲಾಶಯ