ಬೆಳಗಾವಿ: ಲಾಕ್ಡೌನ್ ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡು ಉಪವಾಸವಿರುವ ಕೂಲಿಕಾರರಿಗೆ, ಕಡು ಬಡವರಿಗೆ ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿಗಳು ಆಹಾರ ಧಾನ್ಯ, ಮತ್ತಿತರ ಅಗತ್ಯ ವಸ್ತುಗಳನ್ನು ಪೂರೈಸಿದರು.
ನಗರದ ಶಿವಬಸವನಗರದ ಮಠದ ಆವರಣದಲ್ಲಿಯ ಸಭಾಂಗಣದಲ್ಲಿ ಇಂದು ಐವತ್ತು ಕುಟುಂಬಗಳಿಗೆ ಒಂದು ತಿಂಗಳಿಗಾಗುವಷ್ಟು ಆಹಾರ ಧಾನ್ಯವನ್ನು ಸ್ವಾಮೀಜಿಗಳು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಸ್ವಾಮೀಜಿ, ಕೊರೊನಾ ವೈರಾಣು ಎದುರಿಸಲು ಎಲ್ಲರೂ ಕೈಗೂಡಿಸಿ ಕೆಲಸ ಮಾಡಬೇಕು. ಕಡುಬಡವರಿಗೆ ತಮ್ಮ ಮಠದಿಂದ ಒಂದು ತಿಂಗಳಿಗೆ ಅವಶ್ಯವಿರುವ ಅಕ್ಕಿ, ಸಕ್ಕರೆ, ಎಣ್ಣೆ, ಜೀರಿಗೆ, ಸಾಸಿವೆ ಮತ್ತಿತರ ಅಗತ್ಯ ವಸ್ತುಗಳನ್ನು ನೀಡಲಾಗಿದೆ. ಇನ್ನೂ ಹೆಚ್ಚಿನ ಕುಟುಂಬಗಳಿಗೆ ಅವಶ್ಯವೆನಿಸಿದರೆ ಒದಗಿಸಲಾಗುವುದು ಎಂದು ಹೇಳಿದರು.
ಶಾಸಕ ಅನಿಲ ಬೆನಕೆ ಮಾತನಾಡಿ, ಕೊರೊನಾ ಮಹಾಮಾರಿಯನ್ನು ಎದುರಿಸುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೇಶಕ್ಕೆ ನೀಡಿರುವ ಸಲಹೆಯನ್ನು ಎಲ್ಲರೂ ಚಾಚೂ ತಪ್ಪದೇ ಪಾಲಿಸಬೇಕಾಗಿದೆ ಎಂದರು.