ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರ ರಾಜ್ಯದ ಘಟ್ಟ ಪ್ರದೇಶದಲ್ಲಿ ಮತ್ತು ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ಪ್ರವಾಹದ ಭೀತಿಯಲ್ಲಿರುವ ಚಿಕ್ಕೋಡಿ ತಾಲೂಕಿನ ನದಿ ತೀರದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ ನೀಡಿ ಪರಿಶೀಲಿಸಿದರು.
ಪ್ರವಾಹ ಭೀತಿ: ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿ ತೀರದ ಗ್ರಾಮಗಳಾದ ಮಾಂಜರಿ, ಯಡೂರು, ಕಲ್ಲೋಳಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ ನೀಡಿ, ಪ್ರವಾಹದ ಬಗ್ಗೆ ಮಾಹಿತಿ ಪಡೆದುಕೊಂಡರು.
ಚಿಕ್ಕೋಡಿ ತಾಲೂಕಿನ ಮಾಂಜರಿ, ಯಡೂರು, ಕಲ್ಲೋಳ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಕೃಷ್ಣಾ ನದಿ ಪ್ರವಾಹದ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಯಡೂರ-ಕಲ್ಲೋಳ ಬ್ರಿಡ್ಜ್ ವೀಕ್ಷಣೆ ಮಾಡಿ ನೀರಿನ ಪ್ರಮಾಣ ವೀಕ್ಷಿಸಿದರು. ಅಲ್ಲದೆ ಯಡೂರ ಗ್ರಾಮದಲ್ಲಿ ವಾಸ್ತವ್ಯ ಹೂಡಿರುವ ಎನ್‌ಡಿಆರ್‌ಎಫ್ ತಂಡವನ್ನ ಭೇಟಿಯಾಗಿ ಪ್ರವಾಹದ ಬಗ್ಗೆ ಚರ್ಚೆ ನಡೆಸಿದರು.
ಈಗಾಗಲೇ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಐವತ್ತು ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಪ್ರವಾಹದ ಮಾಹಿತಿ ಪಡೆದುಕೊಂಡು ಎಲ್ಲಾ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕೆಂದು ಸೂಚಿಸಿದರು.