ಕರ್ನಾಟಕ

karnataka

ETV Bharat / city

ಯುದ್ಧಕ್ಕೂ ಮೊದಲೇ ಕೈ ತಾಲೀಮು.. ಬೆಳಗಾವಿ ಬೈ ಎಲೆಕ್ಷನ್‌ ಕುರಿತು ಡಿಕೆಶಿ ನೇತೃತ್ವದಲ್ಲಿ ಸಭೆ - DK Sivakumar meeting in Belgaum

ಲಿಂಗಾಯತ ಸಮುದಾಯದ ಪ್ರಮುಖ ನಾಯಕಿ ಮತ್ತು ಜಿಲ್ಲೆಯಲ್ಲಿ ಹಿಡಿತ ಇರುವ ಕಾರಣಕ್ಕೆ ಹೆಬ್ಬಾಳ್ಕರ್​ಗೆ ಬೈ ಎಲೆಕ್ಷನ್‌ನಲ್ಲಿ ಸ್ಪರ್ಧಿಸುವಂತೆ ಕೆಲವರು ಸಲಹೆ‌ ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ನೀಡಿದ್ರೂ, ಒಗ್ಗಟ್ಟಿನಿಂದ ಕೆಲಸ ಮಾಡಲು ಡಿಕೆಶಿ ಖಡಕ್ ಸೂಚನೆ ನೀಡಿದ್ದಾರೆ..

dk-sivakumar-meeting-in-belgaum-lok-sabha-by-election
ಉಪಚುನಾವಣೆ ಘೋಷಣೆಗೂ ಮುನ್ನವೇ ಬೆಳಗಾವಿಯಲ್ಲಿ ಡಿಕೆಶಿ ನೇತೃತ್ವದ ಮಹತ್ವದ ಸಭೆ

By

Published : Oct 2, 2020, 9:52 PM IST

ಬೆಳಗಾವಿ :ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ಉಪಚುನಾವಣೆಗೆ ಸಾಕ್ಷಿಯಾಗಲಿದೆ. ವಿಶೇಷ ಅಂದ್ರೆ ಉಪ ಚುನಾವಣೆ ಘೋಷಣೆಗೂ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಯಿತು.

ಉಪಚುನಾವಣೆ ಘೋಷಣೆಗೂ ಮುನ್ನವೇ ಬೆಳಗಾವಿಯಲ್ಲಿ ಡಿಕೆಶಿ ನೇತೃತ್ವದ ಮಹತ್ವದ ಸಭೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಸೇರಿ ಜಿಲ್ಲೆಯ ಪ್ರಮುಖ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ಗೂ ಟಿಕೆಟ್ ನೀಡುವಂತೆ ಕೆಲ ಕಾರ್ಯಕರ್ತರು ಸಭೆಯಲ್ಲಿ ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಲಿಂಗಾಯತ ಸಮುದಾಯದ ಪ್ರಮುಖ ನಾಯಕಿ ಮತ್ತು ಜಿಲ್ಲೆಯಲ್ಲಿ ಹಿಡಿತ ಇರುವ ಕಾರಣಕ್ಕೆ ಹೆಬ್ಬಾಳ್ಕರ್​ಗೆ ಬೈ ಎಲೆಕ್ಷನ್‌ನಲ್ಲಿ ಸ್ಪರ್ಧಿಸುವಂತೆ ಕೆಲವರು ಸಲಹೆ‌ ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ನೀಡಿದ್ರೂ, ಒಗ್ಗಟ್ಟಿನಿಂದ ಕೆಲಸ ಮಾಡಲು ಡಿಕೆಶಿ ಖಡಕ್ ಸೂಚನೆ ನೀಡಿದ್ದಾರೆ. ಈ ಹಿಂದೆ ಏನಾಗಿದೆ ಗೊತ್ತಿಲ್ಲ. ಮುಂದೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಪಕ್ಷ ವಿರೋಧಿ ಕೆಲಸ ಮಾಡುವವರಿಗೆ ಪಕ್ಷದಿಂದ ಗೇಟ್ ಪಾಸ್ ಗ್ಯಾರಂಟಿ ಅಂತಾ ಕಾರ್ಯಕರ್ತರಿಗೆ ಡಿಕೆಶಿ ವಾರ್ನಿಂಗ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ABOUT THE AUTHOR

...view details