ಬೆಳಗಾವಿ :ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗಿದೆ. ಪರಿಣಾಮ ಜಿಲ್ಲೆಯ ಘಟಪ್ರಭಾ, ಮಲಪ್ರಭಾ ಹಾಗೂ ರಾಕ್ಕಸಕೊಪ್ಪ ಜಲಾಶಯಶಗಳಲ್ಲಿ ನೀರಿನ ಸಂಗ್ರಹವಿದೆ. ಹೀಗಿದ್ದರೂ ಬೆಳಗಾವಿ ಮಹಾನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.
ಬೆಳಗಾವಿ ನಗರದ ಅನೇಕ ಬಡಾವಣೆಯಲ್ಲಿ ಕಳೆದ 10 ದಿನಗಳಿಂದ ನೀರು ಪೂರೈಕೆಯಾಗಿಲ್ಲ. ಬೇಸಿಗೆ ಆರಂಭವಾಗಿದ್ದು, ನೀರು ಸಿಗದಿರುವುದಕ್ಕೆ ಜನರು ಕಂಗಾಲಾಗಿದ್ದಾರೆ. ಮಹಾನಗರ ಪಾಲಿಕೆಯಿಂದ ಟ್ಯಾಂಕರ್ ಮೂಲಕ ಕೆಲವು ಕಡೆ ನೀರು ಪೂರೈಕೆ ಮಾಡಲಾಗುತ್ತಿದೆ.
ನಗರಕ್ಕೆ ರಾಕಸಕೊಪ್ಪ, ಹಿಡಕಲ್ ಜಲಾಶಯದಿಂದ ನೀರು ಪೂರೈಕೆ ಆಗುತ್ತದೆ. ಎರಡೂ ಜಲಾಶಯಗಳಲ್ಲಿ ಸಾಕಷ್ಟು ನೀರಿನ ಸಂಗ್ರಹವಿದೆ. ಹೀಗಿದ್ದರೂ ಜನರಿಗೆ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದೆ. ನೀರಿನ ಟ್ಯಾಂಕರ್‌ಗಳು ಬಡಾವಣೆಗಳಿಗೆ ಬರ್ತಿದ್ದಂತೆ ಜನರು ತಳ್ಳಾಡಿಕೊಂಡು ನೀರು ಸಂಗ್ರಹಿಸುತ್ತಿದ್ದಾರೆ. ನೀರಿಗಾಗಿ ಜನರು ವಾಗ್ವಾದ ಮಾಡುತ್ತಿದ್ದಾರೆ.