ಚಿಕ್ಕೋಡಿ:ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಪರಿಣಾಮ ಗಡಿಭಾಗದಲ್ಲಿರುವ ನಿಪ್ಪಾಣಿ ತಾಲೂಕಿನ ಕೊಗನೊಳಿ ಚೆಕ್‌ಪೋಸ್ಟ್ ಬಳಿ ಭಾರಿ ಭದ್ರತೆ ಕೈಗೊಳ್ಳಲಾಗಿದೆ.
ಕೊಗನೊಳಿ ಚೆಕ್‌ಪೋಸ್ಟ್ ಬಳಿ ಡ್ರೋನ್ ಕ್ಯಾಮೆರಾ ಕಣ್ಗಾವಲು - ಕೊರೊನಾ ಪ್ರಕರಣ ಏರಿಕೆ
ನೆರೆಯ ರಾಜ್ಯದಿಂದ ಕರ್ನಾಟಕಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುತ್ತಿರುವ ಕಾರಣ ಚೆಕ್ಪೋಸ್ಟ್ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಡ್ರೊಣ್ ಕ್ಯಾಮೆರಾ ಕಣ್ಗಾವಲು
ಮಹರಾಷ್ಟ್ರದಿಂದ ಒಂದೂ ವಾಹನವೂ ಕರ್ನಾಟಕಕ್ಕೆ ಬರದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಜನರು ನೆರೆಯ ರಾಜ್ಯದಿಂದ ಕರ್ನಾಟಕಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುತ್ತಿರುವ ಕಾರಣ ಎಲ್ಲ ವಾಹನಗಳನ್ನು ಚೆಕ್ಪೋಸ್ಟ್ನಲ್ಲಿ ತಪಾಸಣೆ ಮಾಡಲಾಗುತ್ತಿದೆ.
ಅನ್ಯ ಮಾರ್ಗಗಳಿಂದ ಬರುತ್ತಿರುವ ಪ್ರತಿಯೊಂದು ವಾಹನಗಳ ಮೇಲೆ ಕಣ್ಣಿಡಲು ಡ್ರೋನ್ ಕ್ಯಾಮೆರಾ ಮೂಲಕ ಕಟ್ಟೆಚ್ಚರ ವಹಿಸಲಾಗಿದೆ.