ಕರ್ನಾಟಕ

karnataka

ETV Bharat / city

ನಮ್ಮನ್ನ ಸ್ಥಳಾಂತರಿಸಿ, ಇಲ್ಲದಿದ್ರೆ ಚುನಾವಣೆ ಬಹಿಷ್ಕರಿಸುತ್ತೇವೆ: ಗ್ರಾಮಸ್ಥರ ಎಚ್ಚರಿಕೆ - ರಮೇಶಗೌಡ ಪಾಟೀಲ್​

ಬೆಳಗಾವಿ‌ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮ ಪ್ರವಾಹದ ಸಂದರ್ಭದಲ್ಲಿ ಸಂಪೂರ್ಣ ಮುಳುಗಡೆಯಾಗುತ್ತದೆ. ಶೀಘ್ರವಾಗಿ ನಮ್ಮನ್ನು ಸ್ಥಳಾಂತರ ಮಾಡದಿದ್ರೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಗ್ರಾಮದ ಮುಖಂಡ ರಮೇಶಗೌಡ ಪಾಟೀಲ್​ ಎಚ್ಚರಿಕೆ ನೀಡಿದ್ದಾರೆ.

ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರಿಂದ ಎಚ್ಚರಿಕೆ

By

Published : Oct 3, 2019, 10:56 PM IST

ಚಿಕ್ಕೋಡಿ: ಬೆಳಗಾವಿ‌ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮ ಪ್ರವಾಹದ ಸಂದರ್ಭದಲ್ಲಿ ಸಂಪೂರ್ಣ ಮುಳುಗಡೆಯಾಗುತ್ತದೆ. ಶೀಘ್ರವಾಗಿ ನಮ್ಮನ್ನು ಸ್ಥಳಾಂತರ ಮಾಡದಿದ್ರೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಗ್ರಾಮದ ಮುಖಂಡ ರಮೇಶಗೌಡ ಪಾಟೀಲ್​ ಎಚ್ಚರಿಕೆ ನೀಡಿದ್ದಾರೆ.

ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರಿಂದ ಎಚ್ಚರಿಕೆ

ಗ್ರಾಮದಲ್ಲಿ ಹಲವಾರು ಸಮಸ್ಯೆಗಳಿದ್ದು, ರೇಷನ್ ಕಾರ್ಡ್ ಆಧಾರಿತ ಪರಿಹಾರ ವಿತರಣೆ ವಿಳಂಬವಾಗುತ್ತಿದೆ. ಗ್ರಾಮವನ್ನು ಸಂಪೂರ್ಣವಾಗಿ ಸ್ಥಳಾಂತರ ಮಾಡಬೇಕಾದ ಅಗತ್ಯವಿದ್ದು ಸರ್ಕಾರ ಈ ಕುರಿತು ನಿರ್ಧಾರ ಕೈಗೊಳ್ಳಬೇಕಿದೆ. ನಾಳೆ ಸಹ ಮುಖ್ಯಮಂತ್ರಿಗಳು ಅಥಣಿ ತಾಲೂಕಿನ ದರೂರ ಗ್ರಾಮಕ್ಕೆ ಆಗಮಿಸುತ್ತಿದ್ದು ಸೂಕ್ತ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಬೇಕು. ಅಧಿಕಾರಿಗಳು ಗ್ರಾಮ ಸ್ಥಳಾಂತರ ಕುರಿತು ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ ಎಂದು ಆರೋಪಿಸಿದರು.

ಗ್ರಾಮದ ಸಮಸ್ಯೆಗಳ ಕುರಿತು ಸಿಎಂ ಬಿ.ಎಸ್ ಯಡಿಯೂರಪ್ಪ ಪರಿಹಾರದ ನೀಡಬೇಕು. ಇಲ್ಲದಿದ್ದರೆ ಮುಂಬರುವ ಚುನಾವಣೆಯನ್ನು ಸಮಸ್ತ ಗ್ರಾಮದ ಜನತೆ ಬಹಿಷ್ಕರಿಸುತ್ತೇವೆ. ಜನತೆಯ ಸಂಕಷ್ಟಕ್ಕೆ ಸ್ಪಂದಿಸುವುದು ಸರ್ಕಾರದ ಕರ್ತವ್ಯ. ಅಲ್ಲದೇ ನಮ್ಮನ್ನ ಸಂಕೋನಟ್ಟಿ ಗ್ರಾಮಕ್ಕೆ ಸ್ಥಳಾಂತರ ಮಾಡಿ ಆದೇಶ ನೀಡಬೇಕು. ಅಲ್ಲಿ ಮನೆಗಳನ್ನು ನಿರ್ಮಿಸಿಕೊಡಬೇಕು. ಗ್ರಾಮದ ಜನ ಈ ಕುರಿತು ಗ್ರಾಮ ಪಂಚಾಯಿತಿಗೆ ಮನವಿ ನೀಡಿದ್ದು ಸಿಎಂಗೆ‍ ಮನವಿ ಸಲ್ಲಿಸಲಿದ್ದೇವೆ ಎಂದರು.

ABOUT THE AUTHOR

...view details