ಬೆಳಗಾವಿ:ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಅಲ್ಲಿನ ಸಿಎಂ ಅವರಿಗೆ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
ಕನ್ನಡದ ಬಾವುಟಕ್ಕೆ ಅಪಮಾನ ಮಾಡಿದ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಒತ್ತಾಯ ಮಾಡಿದ್ದಾರೆ. ಕನ್ನಡಿಗರೆಲ್ಲರ ಅಧಿಕೃತ ಬೆಂಬಲದ ಠಸ್ಸೆ ಬಿದ್ದಿರುವ ಕನ್ನಡ ಬಾವುಟ ನಮ್ಮ ಘನತೆ, ಗೌರವ ಮತ್ತು ಅಸ್ಮಿತೆಯ ಸಂಕೇತ. ಕನ್ನಡ ಧ್ವಜಕ್ಕೆ ಮಾಡುವ ಅವಮಾನ ಕನ್ನಡಿಗರಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಮಾಡುವ ಅವಮಾನ. ಕನ್ನಡ ಧ್ವಜವನ್ನು ಸುಟ್ಟು ಅವಮಾನಿಸಿದ ಕನ್ನಡ ದ್ರೋಹಿ ದುರುಳರನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮಕೈಗೊಳ್ಳಿ ಮಹಾರಾಷ್ಟ್ರ ಮುಖ್ಯಮಂತ್ರಿಗಳೇ ಎಂದು ಹೇಳಿದ್ದಾರೆ.