ಬೆಳಗಾವಿ: ಮತ್ತೆ ರಾಜ್ಯ ಸಚಿವ ಸಂಪುಟ ಸೇರಲು ಇನ್ನಿಲ್ಲದ ಪ್ರಯತ್ನಗಳನ್ನು ಮುಂದುವರಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂಬೈ ಪ್ರಯಾಣವನ್ನು ದಿಢೀರ್ ರದ್ದು ಮಾಡಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಮುಂಬೈ ಪ್ರಯಾಣ ದಿಢೀರ್ ರದ್ದು: ಬೆಂಗಳೂರಿನತ್ತ ರಮೇಶ್ ಜಾರಕಿಹೊಳಿ - ಬಿಜೆಪಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮುಂಬೈ ಪ್ರವಾಸ ದಿಢೀರ್ ರದ್ದಾಗಿದ್ದು, ಮುಂಬೈನತ್ತ ಹೊರಟ್ಟಿದ್ದ ಅವರು ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದಾರೆ. ನಾಳೆ ಸಿಎಂ ಬಿಎಸ್‌ವೈ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಕಟೀಲ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಭೇಟಿಗಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಮುಂಬೈಗೆ ತೆರಳಿದ್ದರು. ಆದರೆ, ಕೊನೆ ಘಳಿಗೆಯಲ್ಲಿ ರಮೇಶ್ ಅವರ ಪ್ರವಾಸದಲ್ಲಿ ಬದಲಾವಣೆ ಆಗಿದೆ.
ಮುಂಬೈ ಪ್ರಯಾಣ ರದ್ದಾದ ಬೆನ್ನೆಲ್ಲೆ ರಮೇಶ್ ಜಾರಕಿಹೊಳಿ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದಾರೆ. ಮಧ್ಯಾಹ್ನ 3.30ಕ್ಕೆ ಬೆಳಗಾವಿಯಿಂದ ತೆರಳಿದ್ದು, ರಾತ್ರಿ 9ರ ಸುಮಾರಿಗೆ ಬೆಂಗಳೂರು ತಲುಪಲಿದ್ದಾರೆ. ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಿಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಆಗುವ ಸಾಧ್ಯತೆ ಇದೆ. ನಾಳೆ ಸಂಜೆ ಬೆಂಗಳೂರಿನಿಂದ ಮುಂಬೈಗೆ ತೆರಳುವ ಸಾಧ್ಯತೆ ಇದೆ. ಮುಂಬೈನಲ್ಲಿ ದೇವೇಂದ್ರ ಫಡ್ನವೀಸ್ ಜೊತೆಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಬಳಿಕ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.