ಕರ್ನಾಟಕ

karnataka

ETV Bharat / city

SSLC ಪರೀಕ್ಷೆ ಭಯ: ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ - ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯೋರ್ವಳು ನಿನ್ನೆ ತಡರಾತ್ರಿ ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ವಡಗಾವಿಯಲ್ಲಿ ನಡೆದಿದೆ.

SSLC Student committed suicide
ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

By

Published : Jun 25, 2020, 12:38 PM IST

ಬೆಳಗಾವಿ:ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ತಡರಾತ್ರಿ ನೇಣಿಗೆ ಶರಣಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ವಡಗಾವಿ ನಿವಾಸಿ ಸುಜಾತಾ ಢಗೆ (16) ಆತ್ಮಹತ್ಯೆಗೆ ‌ಶರಣಾಗಿರುವ ಬಾಲಕಿ. ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಳಗಾವಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಜಾತಾ, ವಡಗಾವಿಯ ಕಲಮೇಶ್ವರ ರಸ್ತೆಯಲ್ಲಿರುವ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾಳೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

ABOUT THE AUTHOR

...view details