ಕರ್ನಾಟಕ

karnataka

ETV Bharat / city

ಕಬ್ಬಿನ ಗದ್ದೆಗೆ ಬೆಂಕಿ: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಲಕ್ಷಾಂತರ ಮೌಲ್ಯದ ಬೆಳೆನಾಶ - sugarcane news

ಬೆಳಗಾವಿ‌ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ 10ಕ್ಕೂ ಹೆಚ್ಚು ರೈತರ ಕಬ್ಬಿನ ಗದ್ದೆಗೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು ಅನ್ನದಾತರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.

ten farmers sugarcane burnt in chikodi
ಕಬ್ಬಿನ ಗದ್ದೆಗೆ ಬೆಂಕಿಯಿಟ್ಟ ಕಿಡಿಗೇಡಿಗಳು

By

Published : Oct 3, 2021, 7:29 AM IST

ಚಿಕ್ಕೋಡಿ: 10ಕ್ಕೂ ಹೆಚ್ಚು ರೈತರ ಲಕ್ಷಾಂತರ ರೂ. ಮೌಲ್ಯದ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ಬೆಳಗಾವಿ‌ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ನಡೆದಿದೆ.

ಮೊನ್ನೆ ತಡರಾತ್ರಿ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಳೆದು ನಿಂತಿದ್ದ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸುಮಾರು 10 ಕ್ಕೂ ಹೆಚ್ಚು ರೈತರ ಬೆಳೆ ಸುಟ್ಟುಹೋಗಿದ್ದು, ಅನ್ನದಾತರು ಕಣ್ಣೀರಿಡುತ್ತಿದ್ದಾರೆ.

ಬೆಳೆನಾಶದಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ, ಕಿಡಿಗೇಡಿಗಳ ಕೃತ್ಯದಿಂದ ರೈತರು ಕಂಗಾಲಾಗಿದ್ದಾರೆ. ಬೆಳೆ ಹಾನಿಯಾದ 10ಕ್ಕೂ ಹೆಚ್ಚು ರೈತರಿಗೆ ಸರ್ಕಾರ ಸೂಕ್ತ ಆರ್ಥಿಕ ನೆರವು ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಕುರಿತು ಘಟನಾ ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ABOUT THE AUTHOR

...view details