ಕರ್ನಾಟಕ

karnataka

ETV Bharat / city

ನಕಲಿ ಛಾಪಾ ಕಾಗದ ಹಗರಣ ಬಯಲಿಗೆಳೆದಿದ್ದ ಜಯಂತ್ ತಿನೇಕರ್ ಮೇಲೆ ಮಾರಣಾಂತಿಕ ಹಲ್ಲೆ..! - Social Worker Jayanth Mukund Thinekar

ನಕಲಿ ಛಾಪಾ ಕಾಗದ ಹಗರಣ ಬಯಲಿಗೆಳೆದಿದ್ದ ಖಾನಾಪುರದ ಸಾಮಾಜಿಕ ಕಾರ್ಯಕರ್ತ ಜಯಂತ್​ ಮುಕುಂದ್​ ತಿನೇಕರ್​ ಎಂಬುವರ ಮೇಲೆ ಏಳೆಂಟು ಮುಸುಕುಧಾರಿಗಳ ಗುಂಪೊಂದು ಕಬ್ಬಿಣದ ರಾಡ್​ನಿಂದ ಮಾರಣಾಂತಿಕ ಹಲ್ಲೆ ನಡೆಸಿದೆ. ಗಂಭೀರವಾಗಿ ಗಾಯಗೊಂಡಿರುವ ಜಯಂತ್​ ಅವರನ್ನು ಬೆಳಗಾವಿಯ ಸಿವಿಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

fatal-attack-on-social-worker-jayant-thinekar
ಸಾಮಾಜಿಕ ಕಾರ್ಯಕರ್ತ ಜಯಂತ್ ತಿನೇಕರ್ ಮೇಲೆ ಮಾರಣಾಂತಿಕ ಹಲ್ಲೆ..!

By

Published : Mar 5, 2022, 1:20 PM IST

Updated : Mar 5, 2022, 4:50 PM IST

ಬೆಳಗಾವಿ: ಖಾನಾಪುರದ ಸಾಮಾಜಿಕ ಕಾರ್ಯಕರ್ತ ಜಯಂತ್ ಮುಕುಂದ್ ತಿನೇಕರ್ (62) ಎಂಬುವರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಏಳೆಂಟು ಜನರ ಗುಂಪೊಂದು ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿ ಪರಾರಿ ಆಗಿದೆ.

ಇತ್ತ ಗಂಭೀರವಾಗಿ ಗಾಯಗೊಂಡಿದ್ದ ಜಯಂತ್​ ಅವರನ್ನು ಬೆಳಗಾವಿ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ತಾಲೂಕಿನ ಖಾನಾಪುರ - ಬೆಳಗಾವಿ ಹೆದ್ದಾರಿಯ ಝಾಡ್ ಶಹಾಪುರ ಬಳಿ ಹಿಂಬಾಲಿಸಿಕೊಂಡು ಬಂದ ಮುಸುಕುದಾರಿಗಳು ಕಾರು ತಡೆದು ಕಬ್ಬಿಣದ ರಾಡ್​ಗಳಿಂದ ಥಳಿಸಿದ್ದಾರೆ. ಈ ವೇಳೆ, ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಕೆಲ ಲಾರಿ ಚಾಲಕರು ಸಹಾಯಕ್ಕೆ ಧಾವಿಸಿದ್ದರಿಂದ ಹೆಚ್ಚಿನ ಅಪಘಾತ ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಮಾಜಿಕ ಕಾರ್ಯಕರ್ತ ಜಯಂತ್​ ಮುಕುಂದ್​ ತಿನೇಕರ್​

ಇತ್ತ ಹಲ್ಲೆ ಮಾಡಿದ ಆರೋಪಿಗಳು ಅಪರಿಚಿತರಾಗಿದ್ದು, ಮುಖಕ್ಕೆ ಸ್ಕಾರ್ಫ್ ಹಾಕಿಕೊಂಡಿದ್ದರು. ಹೊಡೆತದ ವೇಳೆ ಜಯಂತ್​ ತಿನೇಕರ್ ಅವರ ಬಲ ಮೊಣಕಾಲು ಮುರಿದಿದ್ದು, ಬಲ ಭುಜದ ಬಳಿಯೂ ಗಂಭೀರ ಗಾಯವಾಗಿದೆ. ಖಾನಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬೆಳಗಾವಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯಂತ ತಿನೇಕರ ಹಿನ್ನೆಲೆ: ಬೆಳಗಾವಿ ಜಿಲ್ಲೆಯ ಖಾನಾಪುರದ ನಿವಾಸಿ ಜಯಂತ ಮುಕುಂದ ತಿನೇಕರ್​ ಅವರು, ನಕಲಿ ಛಾಪಾ ಕಾಗದ ಹಗರಣವನ್ನು ಬೆಳಕಿಗೆ ತಂದು ರಾಜ್ಯ ಸರ್ಕಾರಕ್ಕೆ ಸಾವಿರಾರು ಕೋಟಿ ರೂ ಉಳಿತಾಯ ಮಾಡುವ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದರು‌. ನಕಲಿ ಛಾಪಾ ಕಾಗದ ಹಗರಣದ ಕುರಿತು ಆಗಿನ ಡಿಜಿಪಿ ಸಾಂಗ್ಲಿಯಾನ ಅವರನ್ನು ಭೇಟಿಯಾಗಿ ಕರೀಂ ಲಾಲ ತೆಲಗಿ ನಡೆಸುತ್ತಿದ್ದ ನಕಲಿ ಛಾಪಾ ದಂಧೆಯ ಬಗ್ಗೆ ದೂರು ನೀಡಿದ್ದರು ಎನ್ನಲಾಗಿದೆ.

Last Updated : Mar 5, 2022, 4:50 PM IST

ABOUT THE AUTHOR

...view details