ಬೆಳಗಾವಿ:ಅಸಭ್ಯ ವರ್ತನೆ ತೋರುತ್ತಿದ್ದ ಉಪನ್ಯಾಸಕನಿಗೆ ಕಾಲೇಜಿನ ಸ್ಟಾಫ್ ರೂಮ್ನಲ್ಲೇ ಉಪನ್ಯಾಸಕಿಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದೆ. ಕಾಲಿನಿಂದ ಒದ್ದು ಚಪ್ಪಲಿ ಹಾಗೂ ಕೋಲಿನಿಂದ ಧರ್ಮದೇಟು ನೀಡಲಾಗಿದೆ. ಎರಡು ದಿನಗಳ ಹಿಂದೆ ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅತಿಥಿ ಉಪನ್ಯಾಸಕಿಯರು ಉಪನ್ಯಾಸಕನನ್ನು ಹಿಗ್ಗಾಮುಗ್ಗಾ ಥಳಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂಗ್ಲಿಷ್ ವಿಭಾಗದ ಉಪನ್ಯಾಸಕ ಅಮಿತ್ ಬಸವಮೂರ್ತಿ ಅಸಭ್ಯವಾಗಿ ವರ್ತಿಸಿ ಧರ್ಮದೇಟು ತಿಂದವರು. ಉಪನ್ಯಾಸಕ ಅಮಿತ್ ನಿತ್ಯ ಮದ್ಯ ಸೇವಿಸಿ ಕಾಲೇಜಿಗೆ ಆಗಮಿಸುತ್ತಿರುವುದಲ್ಲದೆ, ಸಹ ಉಪನ್ಯಾಸಕಿಯರ ಜೊತೆ ಅಸಭ್ಯವಾಗಿ ವರ್ತನೆ ತೋರುತ್ತಿದ್ದರು ಎನ್ನಲಾಗ್ತಿದೆ.