ಕರ್ನಾಟಕ

karnataka

ETV Bharat / city

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ: ಕೊಯ್ನಾ ನದಿ ಪಾತ್ರದ ಜನರಲ್ಲಿ ಹೆಚ್ಚಿದ ಆತಂಕ - ಕೊಯ್ನಾ ನದಿ ಪಾತ್ರದ ಜನರಲ್ಲಿ ಆತಂಕ

ಮಹಾರಾಷ್ಟ್ರದ ಕೊಯ್ನಾ ಡ್ಯಾಂ ಭರ್ತಿಯಾಗುವ ಸಾಧ್ಯತೆ ಇರುವುದರಿಂದ ಕೊಯ್ನಾ ಡ್ಯಾಂನಿಂದ ಬೆಳಗ್ಗೆ 9 ಗಂಟೆಯಿಂದ ಮತ್ತೆ 25 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.

filling the Koina Dam of Maharashtra Release of cusec water
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ, ಕೊಯ್ನಾ ನದಿ ಪಾತ್ರದ ಜನರಲ್ಲಿ ಆತಂಕ

By

Published : Aug 16, 2020, 11:47 AM IST

ಚಿಕ್ಕೋಡಿ:ಮಹಾರಾಷ್ಟ್ರ ಮತ್ತು ಚಿಕ್ಕೋಡಿ ಉಪವಿಭಾಗದಲ್ಲಿ ಕಳೆದ ಎರಡು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ, ದೂಧಗಂಗಾ ಹಾಗೂ ವೇದಗಂಗಾ ನದಿಗಳ ಒಳ ಹರಿವು ಹೆಚ್ಚಳವಾಗಿದೆ.

'ಮಹಾ' ಮಳೆಯ ಅಬ್ಬರ: ಕೊಯ್ನಾ ನದಿ ತೀರದಲ್ಲಿ ಹೆಚ್ಚಿದ ಆತಂಕ

ಕೃಷ್ಣಾ ನದಿಗೆ ಒಳ ಹರಿವು 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ಹರಿಯುತ್ತಿದೆ‌. ಮಹಾರಾಷ್ಟ್ರದ ಕೊಯ್ನಾ ಡ್ಯಾಂ ಭರ್ತಿಯಾಗುವ ಸಾಧ್ಯತೆ ಇರುವುದರಿಂದ ಕೊಯ್ನಾ ಡ್ಯಾಂನಿಂದ ಬೆಳಗ್ಗೆ 9 ಗಂಟೆಯಿಂದ ಮತ್ತೆ 25 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.

ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಕೊಯ್ನಾ ಜಲಾನಯನ ಭಾಗದಲ್ಲಿ ಮಳೆ ಮುಂದುವರೆಯಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗೆ ಮುಂದುವರೆದರೆ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಆಗಲಿದೆ ಎಂದು ನದಿ ತೀರದ ಜನರಲ್ಲಿ ಮತ್ತೆ ಪ್ರವಾಹದ ಆತಂಕ ಮನೆಮಾಡಿದೆ.

ABOUT THE AUTHOR

...view details