ಬೆಳಗಾವಿ: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ನಗರದ ಆಟೋನಗರ ಆರ್ಟಿಓ ಮೈದಾನದ ಬಳಿ ನಡೆದಿದೆ. ರಮೇಶ್ ಬಿರಾದಾರ ಎಂಬುವರಿಗೆ ಸೇರಿದ ಕಾರು ಇದಾಗಿದೆ.
ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ: ಇಬ್ಬರು ಪ್ರಾಣಾಪಾಯದಿಂದ ಪಾರು - ಚಲಿಸುತ್ತಿದ್ದ ಕಾರಿಗೆ ಬೆಂಕಿ
ಬೆಳಗಾವಿ ಪಟ್ಟಣದ ಆಟೋನಗರ ಆರ್ಟಿಓ ಮೈದಾನದ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿಯಿತು. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕಾರಿಗೆ ಬೆಂಕಿ
ವಾಹನದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ರಮೇಶ್ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದ್ರೆ, ಸ್ಥಳಕ್ಕೆ ಸಿಬ್ಬಂದಿ ಆಗಮಿಸುವಷ್ಟರಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು.
ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಳಮಾರುತಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.