ಕರ್ನಾಟಕ

karnataka

ETV Bharat / city

ಮೊದಲ ಹಂತದ ಗ್ರಾಪಂ ಚುನಾವಣೆಗೆ ಬೆಳಗಾವಿ ಜಿಲ್ಲಾಡಳಿತದಿಂದ ಭರದ ಸಿದ್ಧತೆ - ಮೊದಲ ಹಂತದ ಗ್ರಾ.ಪಂ.ಚುನಾವಣೆಗೆ ಬೆಳಗಾವಿ ಜಿಲ್ಲಾಡಳಿತದಿಂದ ಭರದ ಸಿದ್ದತೆ

ಹುಕ್ಕೇರಿ ತಾಲೂಕಿನ ಎಸ್.ಕೆ. ಶಾಲೆಯಲ್ಲಿ ನಾಳೆ ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಭರದ ಸಿದ್ಧತೆ ನಡೆದಿದೆ.

first-phase-gram-panchayat-elections-preparation-by-the-belgaum-district
ಮೊದಲ ಹಂತದ ಗ್ರಾ.ಪಂ.ಚುನಾವಣೆಗೆ ಬೆಳಗಾವಿ ಜಿಲ್ಲಾಡಳಿತದಿಂದ ಭರದ ಸಿದ್ದತೆ

By

Published : Dec 21, 2020, 2:54 PM IST

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಾದ್ಯಂತ ನಾಳೆ ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಜಿಲ್ಲಾಡಳಿತ ಭರದ ಸಿದ್ಧತೆ ನಡೆಸಿದೆ.

ಮೊದಲ ಹಂತದ ಗ್ರಾಪಂ ಚುನಾವಣೆಗೆ ಬೆಳಗಾವಿ ಜಿಲ್ಲಾಡಳಿತದಿಂದ ಭರದ ಸಿದ್ಧತೆ

ಹುಕ್ಕೇರಿ ತಾಲೂಕಿನ ಎಸ್.ಕೆ. ಶಾಲೆಯಲ್ಲಿ ಮೊದಲ ಹಂತದ ಮತದಾನಕ್ಕೆ ಭರದ ಸಿದ್ಧತೆ ನಡೆದಿದೆ. ಇಂದು ಬೆಳಗ್ಗೆಯಿಂದಲೇ ತಾಲೂಕು ಕೇಂದ್ರದಿಂದ ಚುನಾವಣೆ ನಡೆಯಲಿರುವ ಗ್ರಾಮಗಳಿಗೆ ಬ್ಯಾಲೆಟ್ ಬಾಕ್ಸ್ ಜೊತೆಗೆ ತೆರಳುತ್ತಿರುವ ಸಿಬ್ಬಂದಿ, ಮತದಾನಕ್ಕೆ ಪೂರ್ವಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಓದಿ:ಭಿಕ್ಷುಕನನ್ನೇ ಕಣಕ್ಕಿಳಿಸಿದ ಗ್ರಾಮಸ್ಥರು : ಜನರ ಈ ನಿರ್ಧಾರಕ್ಕೆ ಪ್ರೇರಣೆ ಆ ಸಿನಿಮಾ !

ಜಿಲ್ಲೆಯಲ್ಲಿ ಮೊದಲ ಹಂತವಾಗಿ ಬೆಳಗಾವಿ, ಖಾನಾಪುರ, ಹುಕ್ಕೇರಿ, ಬೈಲಹೊಂಗಲ, ಕಿತ್ತೂರು, ಗೋಕಾಕ, ಮೂಡಲಗಿ ತಾಲೂಕಿನ ಒಟ್ಟು 259 ಗ್ರಾಮ ಪಂಚಾಯತಿಗಳಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಯಾ ತಾಲೂಕು ಕೇಂದ್ರಗಳಲ್ಲಿ ಭರದ ಸಿದ್ಧತೆ ನಡೆಸಿದ್ದಾರೆ.

ABOUT THE AUTHOR

...view details