ಕರ್ನಾಟಕ

karnataka

By

Published : Nov 2, 2019, 5:08 PM IST

ETV Bharat / city

4ನೇ ದಿನಕ್ಕೆ ಕಾಲಿಟ್ಟಿ ನೆರೆ ಸಂತ್ರಸ್ತರ ಧರಣಿ ಸ್ಥಳಕ್ಕೆ ಮಹೇಶ್​​ ಕುಮಟಳ್ಳಿ ಭೇಟಿ

ನೆರೆ ವಿಷಯದಲ್ಲಿ ಜಿಲ್ಲಾಡಳಿತ ತಾರತಮ್ಯ ಮಾಡಿದೆ. ಪುನರ್ವಸತಿ ಕುರಿತು ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿ ಸಂತ್ರಸ್ತರು ಮಾಡುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಮಹೇಶ್ ಕುಮಟಳ್ಳಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಮಹೇಶ್ ಕುಮಟಳ್ಳಿ ಭೇಟಿ

ಅಥಣಿ: ನೆರೆ ವಿಷಯದಲ್ಲಿ ಜಿಲ್ಲಾಡಳಿತ ತಾರತಮ್ಯ ಮಾಡಿದೆ. ಪುನರ್ವಸತಿ ಕುರಿತು ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿ ಸಂತ್ರಸ್ತರು ಮಾಡುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಮಹೇಶ್ ಕುಮಟಳ್ಳಿ ಭೇಟಿ

ಹಿಪ್ಪರಗಿ ಆಣೆಕಟ್ಟೆಯ ಹಿನ್ನೀರಿನಿಂದ ಬಾಧಿತವಾಗಿರುವ ಗ್ರಾಮಗಳ ನೂರಾರು ಮನೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹವನ್ನು ಜಿಲ್ಲೆಯ ಅಥಣಿ ತಾಲೂಕಿನ ತಹಶೀಲ್ದಾರ್​ ಕಚೇರಿಯ ಆವರಣದಲ್ಲಿ ನಡೆಸಲಾಗುತ್ತಿದೆ. ಅಧಿಕಾರಿಗಳು ಸರ್ವೆ ಮಾಡುವ ಸಂದರ್ಭದಲ್ಲಿ ತಾರತಮ್ಯ ಮಾಡಿದ್ದು, ಇದರಿಂದಾಗಿ ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದೆ. ಹಾಗೂ ನೆರೆ ಸಂತ್ರಸ್ತರಿಗೆ ಸರಿಯಾದ ಪರಿಹಾರ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇನ್ನು ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ಅಥಣಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಭೇಟಿ ನೀಡಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು. ನಂತರ ಮಾತನಾಡಿದ ಅವರು, ನೆರೆ ವಿಚಾರದಲ್ಲಿ ತಾರತಮ್ಯ ಆಗಿರೋದು ನಿಜ. ನಾನು ಕೂಡ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.

ಮಹೇಶ್ ಕುಮಟಳ್ಳಿ ಮಾತು ನಿಲ್ಲಿಸಿದ ತಕ್ಷಣ ಪ್ರತಿಭಟನಾಕಾರರು, ನಾವು ಅಧಿಕಾರಿಗಳ ಪೊಳ್ಳು ಭರವಸೆಗಳನ್ನು ಒಪ್ಪಲ್ಲ. ಶಾಶ್ವತ ಪರಿಹಾರ ಸಿಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ ಎಂದು ಹೇಳಿದರು.

ABOUT THE AUTHOR

...view details